ಸಂಚಾರ ಉಲ್ಲಂಘನೆ ಪ್ರಕರಣ ನಿಂತಿಲ್ಲ

ಎಚ್.ಡಿ.ಕೋಟೆ ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸಂಚಾರ ಉಲ್ಲಂಘನೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ಕಾರ್ಯಕ್ರಮಕ್ಕೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಚಾಲನೆ ನೀಡಿದರು. ಎಸ್‌ಐ ಪ್ರಕಾಶ್, ಸುರೇಶ್ ನಾಯಕ, ಯೋಗೇಶ್ ಮತ್ತಿತರರಿದ್ದರು.
ಎಚ್.ಡಿ.ಕೋಟೆ ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸಂಚಾರ ಉಲ್ಲಂಘನೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ಕಾರ್ಯಕ್ರಮಕ್ಕೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಚಾಲನೆ ನೀಡಿದರು. ಎಸ್‌ಐ ಪ್ರಕಾಶ್, ಸುರೇಶ್ ನಾಯಕ, ಯೋಗೇಶ್ ಮತ್ತಿತರರಿದ್ದರು.
Published on

ಎಚ್.ಡಿ.ಕೋಟೆ: ಜು.1ರಿಂದ ಸಂಚಾರ ಉಲ್ಲಂಘನೆ ಮಾಡುವ ವಾಹನ ಚಾಲಕರಿಗೆ ಸ್ವಯಂ ಚಾಲಿತ ದಂಡ ವಿಧಿಸುವ ಕ್ರಮ ಜಾರಿಯಲ್ಲಿದ್ದರೂ ಸಂಚಾರ ನಿಯಮ ಉಲ್ಲಂಘನೆ ನಿಂತಿಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಶಬ್ಬೀರ್ ಹುಸೇನ್ ತಿಳಿಸಿದರು.

ಪೊಲೀಸ್ ಇಲಾಖೆ ವತಿಯಿಂದ ಪಟ್ಟಣದಿಂದ ಹ್ಯಾಂಡ್ ಪೋಸ್ಟ್‌ವರೆಗೆ ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಪಟ್ಟಣ ಪೊಲೀಸ್ ಠಾಣೆ ಮುಂಭಾಗ ಭಾನುವಾರ ಹಮ್ಮಿಕೊಂಡಿದ್ದ ಪೊಲೀಸ್ ಸಿಬ್ಬಂದಿ ಬೈಕ್ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಹ್ಯಾಂಡ್ ಪೋಸ್ಟ್ ವೃತ್ತದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸ್ವಯಂ ಚಾಲಿತ ಸಂಚಾರಿ ದಂಡ ವಿಧಿಸಲು ಕ್ಯಾಮರಾವನ್ನು ಅಳವಡಿಸಲಾಗಿದೆ. ಜು.1ರಿಂದ ದಂಡ ವಿಧಿಸುವ ಪ್ರಕ್ರಿಯೆ ಚಾಲನೆಯಲಿದ್ದರೂ ಬೈಕ್ ಸವಾರರು ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು, ಕಾರು ಚಾಲಕರು ಬೆಲ್ಟ್ ಹಾಕದಿರುವುದು, ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದು ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆ ಮುಂದುವರಿದಿದೆ. ನಿಯಮ ಉಲ್ಲಂಘಿಸುವ ವಾಹನ ಮಾಲೀಕರ ಮನೆಗಳಿಗೆ ಸ್ವಯಂ ಚಾಲಿತ ದಂಡದ ರಸೀದಿ ತಲುಪುತ್ತಿದ್ದರು ಕೂಡ ಸಾರ್ವಜನಿಕರು ಇನ್ನೂ ಎಚ್ಚರಿಕೆ ವಹಿಸುತ್ತಿಲ್ಲ. ಆದ್ದರಿಂದ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ವಾಹನ ಚಾಲಕರು ಇನ್ನು ಮುಂದೆ ನಿಯಮಗಳನ್ನು ಪಾಲಿಸಿ ವಾಹನಗಳನ್ನು ಚಲಾಯಿಸಬೇಕು. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಕಾರು ಚಾಲಕರು ಸೀಟ್ ಬೆಲ್ಟ್ ಧರಿಸಿರಬೇಕು. ವಾಹನ ಚಾಲಕರು ಅಡ್ಡಾದಿಡ್ಡಿ ವಾಹನಗಳನ್ನ ನಿಲ್ಲಿಸಬಾರದು, ಅಡ್ಡದಿಡ್ಡಿ ವಾಹನ ಚಲಾಯಿಸಬಾರದು, ವಾಹನ ಚಾಲಕರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ಸಂಚಾರ ನಿಯಮ ಉಲ್ಲಂಘಿಸಿದವರನ್ನ ಪತ್ತೆ ಹಚ್ಚಿ, ದಂಡವನ್ನ ಕಟ್ಟದಿರುವ ವಾಹನಗಳನ್ನು ವಶಕ್ಕೆ ಪಡೆದು ದಂಡ ವಸೂಲಿ ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಎಸ್‌ಐ ಪ್ರಕಾಶ್, ಸುರೇಶ್ ನಾಯಕ್, ಸಿಬ್ಬಂದಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net