

villagers : ಕಾಡಂಚಿನಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಸೆರೆ ಹಿಡಿಯಲು ವಿಫಲರಾದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಅರಣ್ಯ ಸಿಬ್ಬಂದಿಯನ್ನು ಗ್ರಾಮಸ್ಥರು ಹುಲಿ ಸೆರೆಗೆ ಇಟ್ಟಂತಹ ಬೋನಿನೊಳಗೆ ಕೂಡಿ ಹಾಕಿರುವ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ.
ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ಉಪಟಳ ಇರುವುದನ್ನು ತಿಳಿದ ಗ್ರಾಮಸ್ಥರು ಬಂಡೀಪುರ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿ ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.
ಗ್ರಾಮಸ್ಥರು ಮನವಿಯಂತೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆಯವರು ಬೊಮ್ಮಲಾಪುರ ಗ್ರಾಮದಲ್ಲಿ ಹುಲಿ ಹಿಡಿಯಲು ಬೋನು ಇಟ್ಟಿದ್ದರು. ಆದರೆ ಚಾಲಕಿ ಹುಲಿ ಮಾತ್ರ ಬೋನಿಗೆ ಬಿದ್ದಿರಲಿಲ್ಲ. ಇದರಿಂದ ಬೇಸರ ವ್ಯಕ್ತಪಡಿಸಿದ ಗ್ರಾಮಸ್ಥರು ಗ್ರಾಮಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಬೋನಿನೊಳಗೆ ದಿಗ್ಬಂಧನ ಮಾಡಿದರು.(ಏಜೆನ್ಸೀಸ್)