ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ವಿಧಿವಶ

ವಿಜಯವಾಣಿ - 2025-02-25T200404.355 (1)
Published on

ಬೆಂಗಳೂರು: ರಾಜ್ಯದ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದ ಅವರು, ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ದುಡಿದಿದ್ದಾರೆ. ಅವರ ಪುತ್ರಿ ರೇವತಿ ವಿದೇಶದಲ್ಲಿದ್ದು, ಅವರು ಬಂದ ನಂತರವೇ ವಿಮಲಾ ಅವರ ಅಂತ್ಯಕ್ರಿಯೆ ಗುರುವಾರ ಅಂದರೆ ಫೆಬ್ರುವರಿ 27ರಂದು ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net