ಕಾರಿನ ಗಾಜು ಒಡೆದು 3 ಲಕ್ಷ ರೂ.ಕಳ್ಳತನ

Crime Logo
Published on

ಬೆಂಗಳೂರು: ಕಾರಿನ ಗ್ಲಾಸ್ ಒಡೆದು ಡ್ಯಾಶ್ ಬೋರ್ಡ್‌ನಲ್ಲಿದ್ದ 3 ಲಕ್ಷ ರೂ. ಕಳ್ಳತನ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ ವೆಂಕಟೇಶ್ವರಯ್ಯ ಲೇಔಟ್‌ನಲ್ಲಿ ನಡೆದಿದೆ.
ಈ ಸಂಬಂಧ ದೂರುದಾರ ವೆಂಕಟೇಶ್ ಎಂಬುವರು ನೀಡಿರುವ ದೂರಿನನ್ವಯ ಎ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೆಂಕಟೇಶ್ ಅವರು ಆ.೫ ಬ್ಯಾಂಕ್‌ನಿಂದ ಮೂರು ಲಕ್ಷ ಹಣ ಡ್ರಾ ಮಾಡಿ ತಂದಿದ್ದರು. ನಂತರ ಬೆಳಗ್ಗೆ ೧೧ ಗಂಟೆ ಸುಮಾರಿಗೆ ಮನೆಯೊಳಗೆ ಹೋಗಿ ಬರುವುದರೊಳಗೆ ಬೈಕಿನಲ್ಲಿ ಬಂದಿರುವ ಇಬ್ಬರು ದುರ್ಷ್ಕರ್ಮಿಗಳು ಕಾರಿನ ಗ್ಲಾಸ್ ಹೊಡೆದು ಡ್ಯಾಶ್ ಬೋರ್ಡ್‌ನಲ್ಲಿಟ್ಟಿದ್ದ ಹಣವನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net