ಅಮರಗಿರಿ ತಿರುಪತಿಯಲ್ಲಿ ತೆಪ್ಪೋತ್ಸವ

ಅರಸೀಕೆರೆ (ಗ್ರಾಮಾಂತರ) ತಾಲೂಕಿನ ಕಸಬಾ ಹೋಬಳಿಯ ಸುಕ್ಷೇತ್ರ ಅಮರಗಿರಿ ಮಾಲೇಕಲ್ಲು ತಿರುಪತಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಶಾಸಕ ಶಿವಲಿಂಗೇಗೌಡ, ಗೋಪಿನಾಯ್ಕ, ರಾಘವೇಂದ್ರ,ಪ್ರದೀಪ್, ರಂಗಸ್ವಾಮಿ,ಹರೀಶ್, ಗಿರೀಶ್ ನಾಗರಾಜ್ ಇತರರು ಇದ್ದರು.

Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಸಬಾ ಹೋಬಳಿಯ ಸುಕ್ಷೇತ್ರ ಅಮರಗಿರಿ ಮಾಲೇಕಲ್ಲು ತಿರುಪತಿ ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿತು.

ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದ ಪುಷ್ಕರಣಿಯಲ್ಲಿ ಶ್ರೀದೇವಿ ಭೂದೇವಿ ಸಮೇತ ಸ್ವಾಮಿಯ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿ ಇಟ್ಟು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಈ ವೇಳೆ ನೂರಾರು ಭಕ್ತರು ಸ್ವಾಮಿಯನ್ನು ಕಣ್ತುಂಬಿಕೊಂಡರು.

ಅರಸೀಕೆರೆ ಗ್ರಾಮಾಂತರ ಪೋಲಿಸ್ ಇಲಾಖೆ ವತಿಯಿಂದ ಸ್ವಾಮಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ತೆಪ್ಪೋತ್ಸವದಲ್ಲಿ ಪಾಲ್ಗೊಂಡಿದ್ದ ಕ್ಷೇತ್ರದ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಮಾತನಾಡಿ, ಶ್ರೀ ಕ್ಷೇತ್ರದಲ್ಲಿ ನೆರವೇರಿಸುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪೊಲೀಸ್ ಹಾಗೂ ರೈಲ್ವೆ ಇಲಾಖೆ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಪ್ರಶಂಸನೀಯ ಎಂದರು.

ಈ ಸಂದರ್ಭದಲ್ಲಿ ಅರಸೀಕೆರೆ ಡಿವೈಎಸ್‌ಪಿ ಗೋಪಿನಾಯ್ಕ, ಅರಸೀಕೆರೆ ವೃತ ನಿರೀಕ್ಷಕ ರಾಘವೇಂದ್ರ, ಪ್ರದೀಪ್ ನಾಯ್ಕ ಹಾಗೂ ಹಿರಿಯ ಮತ್ತು ಕಿರಿಯ ಪೋಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ತೆಪ್ಪೋತ್ಸವದ ನೆರೆದಿದ್ದ ನೂರಾರು ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net