ರಾಜ್ಯದಲ್ಲಿ ಹನಿಟ್ರ್ಯಾಪ್ ಸದ್ದು; ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ ಎಂದು ಅಶೋಕ | Honey Trap

dk - 2025-03-20T200609.422
Published on

Honey Trap : ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್​ನಲ್ಲಿ ಸಿಲುಕಿರುವ ಕಾಂಗ್ರೆಸ್​ ಸರ್ಕಾರದಲ್ಲಿಗ ಹನಿಟ್ರ್ಯಾಪ್ ಸದ್ದು ಜೋರಾಗಿದೆ ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ವೇದಿಕೆಯಲ್ಲಿ ಹಂಚಿಕೊಂಡಿರುವ ಅಶೋಕ, '' ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ಕೆ.ಎನ್​ ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣನವರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವರಾದ ಸತೀಶ್​ ಜಾರಕಿಹೊಳಿ, ಮಹಾದೇವಪ್ಪ ಅವರು ಸಹ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ''. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಜಿ.ಪರಮೇಶ್ವರ್​ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ್ಗೆ ಬಹಿರಂಗವಾಗಿ ದನಿ ಎತ್ತಿರುವ ಸಚಿವರೆಲ್ಲರೂ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರಿತಿಸಿಕೊಂಡಿರುವವರು ಎನ್ನುವುದು ಕಾಕತಾಳೀಯವೋ ಅಥವಾ ಇದರ ಹಿಂದೆ ರಾಜಕೀಯ ಷಡ್ಯಂತ್ರವೇನಾದರೂ ಇದೆಯೋ? ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ ಎಂದು ಅಶೋಕ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net