ನಾಯಕತ್ವದಲ್ಲಿ ಗೊಂದಲವಿಲ್ಲ

mb patil
Published on

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನಾಯಕತ್ವದ ಗೊಂದಲವೇನು ಇಲ್ಲ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅಭಿಪ್ರಾಯ ಸಂಗ್ರಹದಲ್ಲಿಯೂ ತಪ್ಪಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಪಕ್ಷದ ಶಾಸಕರ ಬಳಿ ಸುರ್ಜೇವಾಲಾ ಅಭಿಪ್ರಾಯ ಕೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ದುಡ್ಡು ಕೊಡುವುದು ಮುಖ್ಯಮಂತ್ರಿಗಳೇ ತಾನೇ ಎಂದು ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನಮ್ಮ 50-60 ಶಾಸಕರ ಮೇಲೆ ಕಣ್ಣಿಟ್ಟು, ಏಜೆಂಟರನ್ನು ಕಳಿಸುತ್ತಿದೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ.

ನಮ್ಮಲ್ಲಿ 140 ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕೆಂದರೆ 80-90 ಶಾಸಕರು ಹೋಗಬೇಕಾಗುತ್ತದೆ. ಈಗ ಯಾರು ಅಷ್ಟು ಮೂರ್ಖರಿಲ್ಲ. ಹಿಂದೇನೋ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲ ನಡೆಯುವುದಿಲ್ಲ. ವಾಸ್ತವವಾಗಿ ಬಿಜೆಪಿ-ಜೆಡಿಎಸ್ ಕೂಟದ 18-20 ಶಾಸಕರು ಕಾಂಗ್ರೆಸ್ ಬಾಗಿಲು ಬಡಿಯುತ್ತಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net