

ಬೆಳಗಾವಿ: ಆಗ ಈಸ್ಟ್ ಇಂಡಿಯಾ ಕಂಪನಿ ಅವರು ದೇಶ ಆಳಿದರೆ, ಇಂದು ಮೋದಾನಿ(ಮೋದಿ-ಅದಾನಿ) ಕಂಪನಿ ಆಳುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಕುರಿತು ಡಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು.
ಬ್ರಿಟಿಷರು ಬಡವರು, ದಲಿತರು, ಶೋಷಿತ ವರ್ಗದವರ ಮೇಲೆ ಆಕ್ರಮಣ ಮಾಡಿದರು. ಅದೇ ರೀತಿ ಮೋದಾನಿ ಕಂಪನಿಯವರು ಈ ವರ್ಗದವರ ಮೇಲೆ ಆಕ್ರಮಣ ಮಾಡುತ್ತಿದೆ. ಅದರ ಭಾಗವಾಗಿ ಒಂದು ದೇಶ ಒಂದು ಚುನಾವಣೆ. ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಾಗದೆ ಎಂದರು.
ವಾಮಮಾರ್ಗದ ಮೂಲಕ ಪಂಡಿತ್ ನೆಹರೂ, ಸರ್ದಾರ್ ವಲ್ಲಭ ಬಾಯಿ ಪಟೇಲ್, ಅಂಬೇಡ್ಕರ್, ಮೌಲಾನ ಆಜಾದ್, ಡಾ.ರಾಜೇಂದ್ರ ಪ್ರಸಾದ್ ಅವರು ರಚಿಸಿರುವ ಸಂವಿಧಾನದ ಮೇಲೆ ಆಕ್ರಮಣ ಮಾಡಲು ಮುಂದಾಗಿದ್ದಾರೆ ಎಂದು ಟೀಕಿದರು.
ಈ ಬಾರಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಎಲ್ಲಾ ವಿಚಾರ ಚರ್ಚೆ ಮಾಡಿ ಪ್ರಮುಖ ನಿರ್ಣಯ ಕೈಗೊಳ್ಳಲಾಗುವುದು. ನಮ್ಮ ಮುಂದಿನ ಹೋರಾಟಕ್ಕೆ ಬೆಳಗಾವಿ ಮತ್ತೊಮ್ಮೆ ನಮಗೆ ದಾರಿ ತೋರಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.