ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ; ಸಚಿವ ಕೆ.ಜೆ.ಜಾರ್ಜ್

kj George
Published on

ಬೆಂಗಳೂರು:

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಹಾಗಾಗಿ ಲೋಡ್ ಶೆಡ್ಡಿಂಗ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಹಿಂದೆ ಇದ್ದ ಪರಿಸ್ಥಿತಿ ಇಲ್ಲ. ನಮ್ಮ ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶಗಳಿವೆ ಎಂದರು.

ಲೋಡ್ ಶೆಡ್ಡಿಂಗ್ ಮಾಡಬಹುದಾದ ಪರಿಸ್ಥಿತಿ ಇನ್ನೂ ಉದ್ಭವಿಸಿಲ್ಲ. ಊಹಾ ಪೋಹಗಳಿಗೆಲ್ಲ ಉತ್ತರ ನೀಡಲು ಆಗುವುದಿಲ್ಲ ಎಂದರು.

ಅಗ್ಗದ ದರದಲ್ಲಿ ಉತ್ಪಾದನೆ ಮಾಡುವ ಜಲ ವಿದ್ಯುತ್ ಯೋಜನೆಗಳಲ್ಲಿ ಕಳೆದ ಬಾರಿಯಷ್ಟು ಪ್ರಮಾಣದಲ್ಲಿ ಡ್ಯಾಂನಲ್ಲಿ ನೀರು ಸಂಗ್ರಹವಾಗಿಲ್ಲ. ಆದರೆ, ಇನ್ನೂ ಮಳೆ ಬರುವ ನಿರೀಕ್ಷೆ ಇದ್ದು, ಜಲಾಶಯಗಳ ಸ್ಥಿತಿ ಉತ್ತಮಗೊಳ್ಳುವ ಸಾಧ್ಯತೆ ಇದೆ ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net