ಮುಖ್ಯಮಂತ್ರಿ ರಾಜೀನಾಮೆ ನೀಡುವ ಅಗತ್ಯವಿಲ್ಲ

Siddaramaiah DK Shivakumar
Published on

ಬೆಂಗಳೂರು: ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಸಿದ್ದರಾಮಯ್ಯ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ನಾನು, ಇಲ್ಲಿ ನಾನೇ ಹೇಳುತ್ತಿದ್ದೇನೆಲ್ಲ. ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಅಂತ ಎಂದು ಹೇಳಿದರು.

ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದನ್ನು ಸಹಿಸಲು ವಿರೋಧ ಪಕ್ಷಗಳಿಂದ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದನ್ನು ಸಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪ ಮಾಡುತ್ತಿದ್ದು, ಈ ವಿಚಾರದಲ್ಲಿ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಸರ್ಕಾರದ ಸಚಿವರುಗಳು ಅನೇಕ ಪ್ರಕರಣಗಳ ತನಿಖೆ ಎದುರಿಸುತ್ತಿದ್ದು, ಮೊದಲು ಅವರನ್ನು ಸಚಿವ ಸಂಪುಟದಿಂದ ಕೈಬಿಡಲಿ. ನಂತರ ಈ ಬಗ್ಗೆ ಚರ್ಚೆ ಮಾಡಲಿ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net