ಬೈಕ್​ಗಳಿಗೆ ಟೋಲ್ ವಿಧಿಸುವ ಚಿಂತನೆ ಇಲ್ಲ

6-685d8a17aac46
Published on

ಮುಂಬೈ: ದ್ವಿಚಕ್ರ ವಾಹನಗಳಿಗೆ ಟೋಲ್ ತೆರಿಗೆ ವಿಧಿಸುವ ಉದ್ದೇಶ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಸ್ಪಷ್ಟಪಡಿಸಿದ್ದಾರೆ.

ದ್ವಿಚಕ್ರ ವಾಹನಗಳಿಗೆ ಹೆದ್ದಾರಿ ಬಳಕೆದಾರ ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಕಠಿಣ ಶಬ್ದಗಳಲ್ಲಿ ಟ್ವೀಟ್ ಮಾಡಿರುವ ಗಡ್ಕರಿ, ‘ಸತ್ಯವನ್ನು ಪರಿಶೀಲಿಸದೆ ಗೊಂದಲಮಯ ಸುದ್ದಿ ಹರಡುವುದು ಆರೋಗ್ಯಕರ ಪತ್ರಿಕೋದ್ಯಮದ ಲಕ್ಷಣವಲ್ಲ’ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್​ಎಚ್​ಎಐ) ಕೂಡ ಒಂದು ಫ್ಯಾಕ್ಟ್​ಚೆಕ್ ಪೋಸ್ಟ್​ನಲ್ಲಿ ‘ಇದು ಸುಳ್ಳು ಸುದ್ದಿ’ ಎಂದು ಸ್ಪಷ್ಟಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net