ನೈತಿಕ ಪೊಲೀಸ್‌ಗಿರಿ ಸಹಿಸುವ ಪ್ರಶ್ನೆಯೇ ಇಲ್ಲ: ಡಾ.ಪರಮೇಶ್ವರ

dr gp
Published on

ಬೆಂಗಳೂರು: ನೈತಿಕ ಪೊಲೀಸ್‌ಗಿರಿಯನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಘಟನೆಗಳನ್ನು ಹತ್ತಿಕ್ಕಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ನೈತಿಕ ಪೊಲೀಸ್‌ಗಿರಿ ವಿಷಯವಾಗಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಕಾನೂನು ಕೈಗೆತ್ತಿಕೊಳ್ಳುವರು ಯಾರೇ ಆಗಿದ್ದರು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಅಂತಹ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದರು.

ರಾಜ್ಯದಲ್ಲಿ ಪದೇ ಪದೇ ಇಂತಹ ಪ್ರಕರಣ ವರದಿಯಾಗುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಎಲ್ಲೇ ಆಗಲೀ, ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇರಬಾರದು. ಇಂತಹುದ್ದೆನ್ನೆಲ್ಲ ಮಟ್ಟ ಹಾಕಬೇಕೆನ್ನುವುದು ಸರ್ಕಾರದ ನಿಲುವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಅದನ್ನು ಪಾಲನೆ ಮಾಡುತ್ತಾರೆ. ಸಂಬಂಧಪಟ್ಟ ಪ್ರಕರಣಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಡಾ.ಪರಮೇಶ್ವರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net