ಅಭಿವೃದ್ಧಿಗೆ ಅನುದಾನ ಕೊರತೆ ಇಲ್ಲ

13kgl06-police-station
ಕಾರ್ಗಲ್‌ನಲ್ಲಿ ನಿರ್ಮಾಣವಾಗುತ್ತಿರುವ ಪೊಲೀಸ್ ಠಾಣೆಯ ಕಟ್ಟಡ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ವೀಕ್ಷಿಸಿದರು. ಎಂ.ರಾಜು, ಜಯಲಕ್ಷ್ಮೀ, ಎಂ.ಕೆ.ಸುರೇಶ್ ಇತರರಿದ್ದರು.
Published on

ಕಾರ್ಗಲ್: ಯೂತ್ ಹಾಸ್ಟೆಲ್‌ನ ನೂತನ ಕಟ್ಟಡ ಹಾಗೂ ದುರಸ್ತಿ ಕಾಮಗಾರಿಯನ್ನು 90 ಲಕ್ಷ ರೂ. ವೆಚ್ಚದಲ್ಲಿ ನೆರವೇರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಮೀಪದ ಜೋಗ ಯೂತ್ ಹಾಸ್ಟೆಲ್ ಕಟ್ಟಡ ಕಾಮಗಾರಿ ನವೀಕರಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಪಾಳು ಬಿದ್ದಿರುವ ಜೋಗದ ಯೂತ್ ಹಾಸ್ಟೆಲ್ ಕಟ್ಟಡದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿ ಕೆಲಸ ಮಾಡಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಪೊಲೀಸ್ ಠಾಣೆ ಕಟ್ಟಡಕ್ಕೆ 1.33 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದು, ನಿರ್ಮಾಣ ಹಂತದಲ್ಲಿದೆ. ಪೊಲೀಸ್ ಸಿಬ್ಬಂದಿಗೆ ವಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪೊಲೀಸ್ ಕ್ವಾರ್ಟರ್ಸ್ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಈಗಾಗಲೇ 3.83 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಜೋಗ ಜಲಪಾತ ವ್ಯಾಪ್ತಿಯಲ್ಲಿ 183 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ನಮ್ಮ ಸರ್ಕಾರದಿಂದ 90 ಕೋಟಿ ರೂ. ಬಿಡುಗಡೆ ಮಾಡಿಸಲಾಗಿದೆ. ತಾಲೂಕಿನಲ್ಲಿ ನಡೆಯುತ್ತಿರುವ ವಿವಿಧ ಕೆಲಸಗಳಿಗೆ ಹಣದ ತೊಂದರೆ ಇಲ್ಲ. ನಾಲ್ಕು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಜೋಗ ಕಾರ್ಗಲ್ ಪಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿ ಪ್ರದೇಶಗಳಿಗೆ ಭೇಟಿ ನೀಡಿದರು. ಪಪಂ ಅಧ್ಯಕ್ಷ ಎಂ.ರಾಜು, ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ಲಕ್ಷ್ಮೀರಾಜು, ಪಿ.ಮಂಜುನಾಥ್, ಸುಜಾತಾ ಜೈನ್, ಮುಖ್ಯಾಧಿಕಾರಿ ಎಂ.ಕೆ.ಸುರೇಶ್, ಪ್ರಮುಖರಾದ ವಿ.ಸಂತೋಷ್‌ಕುಮಾರ್, ಎಚ್.ಎಸ್.ಸಾದಿಕ್, ಬಿ.ಉಮೇಶ್, ಶ್ರೀಧರ್ ಲಿಂಗನಮಕ್ಕಿ, ಎಸ್.ಎಲ್.ರಾಜ್‌ಕುಮಾರ್, ವಿಜಯ್‌ಕುಮಾರ್, ಟಿ.ಸುರೇಶ್, ಸತೀಶ್ ಮಹಾಲೆ, ಗುರು ಲಿಂಗನಮಕ್ಕಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net