ಯುಪಿಪಿಎಸ್ಸಿ ಪರೀಕ್ಷೆಯಲ್ಲಿ ಪೇಪರ್ ಲೀಕ್​! ಆರೋಪ ನಿರಾಕರಿಸಿದ ನೇಮಕಾತಿ ಸಂಸ್ಥೆ, ಗೊಂದಲದಲ್ಲಿ ಅಭ್ಯರ್ಥಿಗಳು

Untitled design (71)
Published on

ಉತ್ತರಪ್ರದೇಶ: ಭಾನುವಾರ (ಫೆ.11) ಉತ್ತರಪ್ರದೇಶ ಲೋಕಸೇವಾ ಆಯೋಗದ (UPPSC) ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ್ದು, ಲೀಕ್ ಆಗಿರುವುದಕ್ಕೆ ಸಂಬಂಧಿಸಿದಂತೆ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಇದರಿಂದ ಆತಂಕಗೊಂಡ ಅಭ್ಯರ್ಥಿಗಳು ಪರೀಕ್ಷಾ ಆಯೋಗದ ವಿರುದ್ಧ ತೀವ್ರ ಬೇಸರ ಹೊರಹಾಕಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯ ಆಪಾದಿತ ಸ್ಕ್ರೀನ್‌ಶಾಟ್‌ಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡ ಅಭ್ಯರ್ಥಿಗಳು, 411 ರಿವ್ಯೂ ಆಫೀಸರ್ ಮತ್ತು ಅಸಿಸ್ಟೆಂಟ್ ರಿವ್ಯೂ ಆಫೀಸರ್ ಹುದ್ದೆಗಳ ಪರೀಕ್ಷೆಗೆ ಬೇಕಾದ ಉತ್ತರಗಳನ್ನು ಪಡೆದಿದ್ದೆವು ಎಂಬುದನ್ನು ಹೇಳಿಕೊಂಡಿದ್ದಾರೆ. ರಾಜ್ಯದ 58 ಜಿಲ್ಲೆಗಳಲ್ಲಿ ಈ ಪರೀಕ್ಷೆ ನಡೆದಿದ್ದು, ಬಾರಾಬಂಕಿ, ಗಾಜಿಪುರ, ಕಾನ್ಪುರ ಮತ್ತು ಅಯೋಧ್ಯೆ ಜಿಲ್ಲೆಗಳಲ್ಲಿ ಹಲವಾರು ಅಭ್ಯರ್ಥಿಗಳು ಪೇಪರ್ ಸೋರಿಕೆಯಾಗಿದೆ ಎಂದು ಆರೋಪಿಸಿದ್ದಾರೆ.

ಆದಾಗ್ಯೂ ಯುಪಿಪಿಎಸ್ಸಿ, ಪತ್ರಿಕೆ ಸೋರಿಕೆಯಾಗಿದೆ ಎಂಬ ಅಭ್ಯರ್ಥಿಗಳ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ ಮತ್ತು ಪರೀಕ್ಷೆಯು ಸುಗಮವಾಗಿ ಮತ್ತು ಪ್ರಾಮಾಣಿಕವಾಗಿ ನಡೆದಿದೆ ಎಂದು ಸ್ಪಷ್ಟಪಡಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net