ಈ 3 ರಾಶಿಯವರು ಹಣ ಖರ್ಚು ಮಾಡುವುದರಲ್ಲಿ ಸದಾ ಮುಂದು! ಏನಾದ್ರೂ ಇಷ್ಟವಾದ್ರೆ ಖರೀದಿಸದೇ ಬಿಡಲ್ಲ | Zodiac Signs

Zodiac Signs
Published on

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಕೆಲವರು ಜೋತಿಷ್ಯದ ಮೊರೆ ಹೋಗುತ್ತಾರೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಯು ಎಲ್ಲ 12 ರಾಶಿಚಕ್ರದ ಚಿಹ್ನೆಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.

ಮನುಷ್ಯನ ಒಳಿತು-ಕೆಡುಕು, ನಡೆ-ನುಡಿ ಎಲ್ಲದರ ಮೇಲೂ ಗ್ರಹಗಳು ಪ್ರಭಾವ ಬೀರುತ್ತವೆ. ಒಬ್ಬ ವ್ಯಕ್ತಿಯ ಭವಿಷ್ಯದ ಜೀವನ ಹೇಗಿರುತ್ತದೆ? ಆತನ ವಿಶಿಷ್ಟ ಗುಣಗಳು ಏನೆಂಬುದನ್ನು ಗ್ರಹಗತಿಗಳ ಆಧಾರದ ಮೇಲೆ ಸುಲಭ ಊಹಿಸಬಹುದಾಗಿದೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ.

ಅಂದಹಾಗೆ ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಜನರು ಹಣದ ಮಹತ್ವವನ್ನು ಅರಿತುಕೊಳ್ಳದೆ ಹೆಚ್ಚು ಖರ್ಚು ಮಾಡುತ್ತಾರೆ. ಆ ರಾಶಿಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಧನುಸ್ಸು ರಾಶಿ

ಧನುಸ್ಸು ರಾಶಿಯ ಚಿಹ್ನೆಯಡಿಯಲ್ಲಿ ಜನಿಸಿದ ಜನರು ಸ್ವಾತಂತ್ರ್ಯವನ್ನು ಹೆಚ್ಚು ಗೌರವಿಸುತ್ತಾರೆ. ತಮಗೆ ಅನಿಸಿದ್ದನ್ನು ಮಾಡಲು ಬಯಸುವ ಗುಣವನ್ನು ಹೊಂದಿರುತ್ತಾರೆ ಮತ್ತು ಈ ರಾಶಿಯವರು ತುಂಬಾ ಶ್ರಮಶೀಲರು. ಅವರ ಬಳಿ ಯಾವಾಗಲೂ ಅಗತ್ಯಕ್ಕಿಂತ ಹೆಚ್ಚಿನ ಹಣವಿರುತ್ತದೆ. ಆದರೆ, ಹೆಚ್ಚಿನ ಸಮಯ ಅವರು ಹಣವನ್ನು ವ್ಯರ್ಥವಾಗಿ ಖರ್ಚು ಮಾಡುತ್ತಾರೆ. ಐಷಾರಾಮಿ ಜೀವನದ ಬಗ್ಗೆ ಅವರಿಗಿರುವ ಅತಿಯಾದ ಉತ್ಸಾಹವು ಅನಗತ್ಯ ವಸ್ತುಗಳಿಗೆ ಹಣವನ್ನು ಖರ್ಚು ಮಾಡುವಂತೆ ಮಾಡುತ್ತದೆ. ಇತರರನ್ನು ಸಂತೋಷಪಡಿಸುವುದಕ್ಕಿಂತ ತಮ್ಮನ್ನು ತಾವು ಸಂತೋಷಪಡಿಸಿಕೊಳ್ಳಲು ಈ ರಾಶಿಯವರು ಹೆಚ್ಚು ಖರ್ಚು ಮಾಡುತ್ತಾರೆ.

ಮೀನ ರಾಶಿ

ಮೀನ ರಾಶಿಯಡಿ ಜನಿಸಿದವರು ತಮ್ಮ ಕುಟುಂಬಕ್ಕಾಗಿ ಅಗತ್ಯಕ್ಕಿಂತಲೂ ಹೆಚ್ಚಿನ ಹಣವನ್ನು ಖರ್ಚು ಮಾಡುತ್ತಾರೆ. ಎಷ್ಟೇ ಹಣವನ್ನು ಪಡೆದರೂ, ಅದನ್ನು ಉಳಿಸುವ ಅಥವಾ ಆದಾಯ ಹೆಚ್ಚಿಸುವ ರೀತಿಯಲ್ಲಿ ಹೂಡಿಕೆ ಮಾಡುವ ಬಗ್ಗೆ ಎಂದಿಗೂ ಯೋಚಿಸುವುದಿಲ್ಲ. ಅವರ ಬಳಿ ಹೆಚ್ಚುವರಿ ಹಣವಿದ್ದಾಗ ತಮ್ಮ ಮನರಂಜನೆಗಾಗಿ ಮತ್ತು ಕೆಲವು ಒಳ್ಳೆಯ ಉದ್ದೇಶಗಳಿಗಾಗಿ ಖರ್ಚು ಮಾಡುತ್ತಾರೆ.

ಕುಂಭರಾಶಿ

ಕುಂಭ ರಾಶಿಯಲ್ಲಿ ಜನಿಸಿದ ಜನರು ವಿವಿಧ ಆಹಾರಗಳನ್ನು ತುಂಬಾ ಇಷ್ಟಪಡುತ್ತಾರೆ. ಆದ್ದರಿಂದ, ಅವರು ಆಹಾರಕ್ಕಾಗಿಯೇ ಹೆಚ್ಚು ಹಣವನ್ನು ಖರ್ಚು ಮಾಡುತ್ತಾರೆ ಮತ್ತು ಹೊಸ ಮೊಬೈಲ್ ಫೋನ್‌ಗಳು ಅಥವಾ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಖರೀದಿಸಲು ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಅವರಿಗೆ ಏನಾದರೂ ಇಷ್ಟವಾದರೆ, ಅದನ್ನು ಖರೀದಿಸುವವರೆಗೂ ಸಮಾಧಾನವಾಗುವುದಿಲ್ಲ. ಹೀಗಾಗಿ ಈ ರಾಶಿಯವರು ಬಹಳಷ್ಟು ಹಣವನ್ನು ಖರ್ಚು ಮಾಡುವ ಅಭ್ಯಾಸವನ್ನು ಹೊಂದಿರುತ್ತಾರೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ ವಿಜಯವಾಣಿ ಡಾಟ್​ ನೆಟ್​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net