

ದೇಶದಲ್ಲಿ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜನರು ಹೈರಾಣಾಗುತ್ತಿದ್ದಾರೆ. ದೇಶವ್ಯಾಪಿ ನಾನಾ ಜಿಲ್ಲೆಗಳಲ್ಲಿ ಈಗಾಗಲೇ ಬೇಸಿಗೆಯ ಮಧ್ಯೆ ಮೊದಲ ವರ್ಷಧಾರೆ ಸುರಿದಿದ್ದು, ಇದೇ ಏಪ್ರಿಲ್ 2ರಿಂದ ಒಡಿಶಾದ ಹಲವಾರು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಸಂಭಾವ್ಯ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭುವನೇಶ್ವರದಲ್ಲಿನ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಾದೇಶಿಕ ಕೇಂದ್ರ ಮಾಹಿತಿ ಹಂಚಿಕೊಂಡಿದೆ.
ಗರಿಷ್ಠ ತಾಪಮಾನದಲ್ಲಿ ನಿರೀಕ್ಷಿತ ಏರಿಕೆ ಮತ್ತು ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆಯ ಕಾರಣದಿಂದ ಒಡಿಶಾದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಹೆಚ್ಚಾಗುವ ಸಾಧ್ಯತೆಯಿದೆ. ಇದರ ಪರಿಣಾಮ, ಏಪ್ರಿಲ್ 2ರಿಂದ ಏಪ್ರಿಲ್ 6ರವರೆಗೆ ರಾಜ್ಯದಾದ್ಯಂತ ಬಿಸಿ ಮತ್ತು ಆರ್ದ್ರ ವಾತಾವರಣವು ಕಂಡುಬರುವ ನಿರೀಕ್ಷೆಯಿದೆ ಎಂದು ಐಎಂಡಿ ಪ್ರಕಟಣೆ ತಿಳಿಸಿದೆ.
ಈ ಮುನ್ಸೂಚನೆಯು ಉತ್ತರ ಛತ್ತೀಸ್‌ಗಢ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಚಂಡಮಾರುತದ ಪ್ರಭಾವ ಇರಲಿದೆ. ಇದು ಹಿಂದೆ ಹವಾಮಾನದ ಮಾದರಿಗಳ ಮೇಲೆ ಪ್ರಭಾವ ಬೀರಿದೆ, ಭುವನೇಶ್ವರದಲ್ಲಿ ಈ ವಾರ ಗರಿಷ್ಠ ತಾಪಮಾನವು 39 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಇದೆಲ್ಲದರ ನಡುವೆ ಹವಾಮಾನ ಇಲಾಖೆ ಭಾನುವಾರ 'ಆರೆಂಜ್ ಅಲರ್ಟ್' ಹೊರಡಿಸಿದ್ದು, ಮುಂದಿನ ಐದು ದಿನಗಳಲ್ಲಿ ಈಶಾನ್ಯದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹೇಳಿದೆ,(ಏಜೆನ್ಸೀಸ್).