

State Budget: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ದಾಖಲೆ 16ನೇ ರಾಜ್ಯ ಬಜೆಟ್ಗೆ ಕ್ಷಣಗಣನೆ ಆರಂಭಗೊಂಡಿದೆ. ಮುಂದಿನ ಆರ್ಥಿಕ ವರ್ಷವಾದ (2025-26)ರ ಬಜೆಟ್ ಘೋಷಿಸಲಿರುವ ಸಿಎಂ, ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸುವತ್ತ ದಾಪುಗಾಲಿಟ್ಟಿದ್ದಾರೆ. ಬಜೆಟ್ ಆರಂಭಕ್ಕೂ ಮುನ್ನ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದು 7 ಕೋಟಿ ಕನ್ನಡಿಗರ ಭರವಸೆ ಈಡೇರಿಸುವ ಬಜೆಟ್ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
"7 ಕೋಟಿ ಕನ್ನಡಿಗರ ಭರವಸೆ ಈಡೇರಿಸುವ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ಸಿದ್ದರಾಮಯ್ಯರಿಗೆ ಇದು 16ನೇ ಬಜೆಟ್. ರಾಜ್ಯ ರಾಜಕೀಯದ ಇತಿಹಾಸದಲ್ಲಿ ಯಾರೊಬ್ಬರು ಮಾಡದ ದಾಖಲೆಯನ್ನು ಅವರು ಮಾಡಲಿದ್ದಾರೆ" ಎಂದರು.
"ಇಂದಿನ ಬಜೆಟ್ ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಭರವಸೆಯಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಪೂರಕ ಕಾರ್ಯಕ್ರಮವನ್ನು ಇಂದಿನ ಬಜೆಟ್ ನೀಡಲಿದೆ ಎಂಬ ವಿಶ್ವಾಸವಿದೆ" ಎಂದು ಹೇಳಿದ್ದಾರೆ.