

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಕೆಲವರು ಜೋತಿಷ್ಯದ ಮೊರೆ ಹೋಗುತ್ತಾರೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಯು ಎಲ್ಲ 12 ರಾಶಿಚಕ್ರದ ಚಿಹ್ನೆಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.
ಮನುಷ್ಯನ ಒಳಿತು-ಕೆಡುಕು, ನಡೆ-ನುಡಿ ಎಲ್ಲದರ ಮೇಲೂ ಗ್ರಹಗಳು ಪ್ರಭಾವ ಬೀರುತ್ತವೆ. ಒಬ್ಬ ವ್ಯಕ್ತಿಯ ಭವಿಷ್ಯದ ಜೀವನ ಹೇಗಿರುತ್ತದೆ? ಆತನ ವಿಶಿಷ್ಟ ಗುಣಗಳು ಏನೆಂಬುದನ್ನು ಗ್ರಹಗತಿಗಳ ಆಧಾರದ ಮೇಲೆ ಸುಲಭ ಊಹಿಸಬಹುದಾಗಿದೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ.
ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಜನರು, ಅವರು ಪುರುಷನಾಗಿರಲಿ ಅಥವಾ ಮಹಿಳೆಯಾಗಿರಲಿ, ಸುಳ್ಳು ಹೇಳುವುದರಲ್ಲಿ ನಿಪುಣರು ಎಂದು ಹೇಳಲಾಗುತ್ತದೆ. ಆ ರಾಶಿಗಳು ಯಾವುವು ಎಂಬುದನ್ನು ನಾವೀಗ ತಿಳಿಯೋಣ.
ಮಿಥುನ ರಾಶಿಚಕ್ರದ ಅಡಿಯಲ್ಲಿ ಜನಿಸಿದ ಜನರು ಸ್ವಾಭಾವಿಕವಾಗಿಯೇ ತಮ್ಮ ದ್ವಂದ್ವ ಸ್ವಭಾವಕ್ಕೆ ಹೆಸರುವಾಸಿಯಾಗಿರುತ್ತಾರೆ. ಅವರಿಗೆ ಇತರರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದುಕೊಳ್ಳುವುದರಲ್ಲಿ ತುಂಬಾ ಆಸಕ್ತಿ ಇರುತ್ತದೆ. ಆದರೆ, ಅವರು ಎಂದಿಗೂ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದಿಲ್ಲ. ಸುಳ್ಳು ಹೇಳುವುದು ಅವರಿಗೆ ಒಂದು ಅದ್ಭುತ ಕಲೆ. ಸತ್ಯವನ್ನು ಹೇಳುವುದರ ಜೊತೆಗೆ ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುತ್ತಾರೆ.
ವೃಶ್ಚಿಕ ರಾಶಿಯಲ್ಲಿ ಜನಿಸಿದ ಜನರು ರಹಸ್ಯಗಳನ್ನು ಇಟ್ಟುಕೊಳ್ಳುವುದರಲ್ಲಿ ನಿಪುಣರು. ಅವರಿಂದ ಮಾಹಿತಿಯನ್ನು ಪಡೆಯುವುದು ಸವಾಲಾಗಿರಬಹುದು. ಅವರು ಸಾಮಾನ್ಯವಾಗಿ ರಹಸ್ಯಗಳನ್ನು ಕಾಪಾಡಿಕೊಳ್ಳಲು ಸುಳ್ಳು ಹೇಳುತ್ತಾರೆ. ಅವರು ಯಾವಾಗಲೂ ನಿಗೂಢ ಸ್ವಭಾವದವರಾಗಿ ಕಾಣುತ್ತಾರೆ. ಅವರು ಏನು ಹೇಳುತ್ತಿದ್ದಾರೆಂದು ಇತರರಿಗೆ ಅರ್ಥಮಾಡಿಕೊಳ್ಳಲು ಕಷ್ಟವಾಗುವ ರೀತಿಯಲ್ಲಿ ಸುಳ್ಳು ಹೇಳುತ್ತಾರೆ. ಹೀಗಾಗಿ ಅವರನ್ನು ಅರ್ಥಮಾಡಿಕೊಳ್ಳುವುದು ಸ್ವಲ್ಪ ಕಷ್ಟಕರವಾಗಿರುತ್ತದೆ.
ಧನುಸ್ಸು ರಾಶಿಯವರು ಯಾವಾಗಲೂ ಸ್ವಾತಂತ್ರ್ಯವನ್ನು ಗೌರವಿಸುತ್ತಾರೆ. ಅವರು ಎಂದಿಗೂ ಸಂಬಂಧಗಳಲ್ಲಿ ಸಿಲುಕಿಕೊಳ್ಳಲು ಬಯಸುವುದಿಲ್ಲ. ತಮ್ಮ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳಲು ಬಹಳಷ್ಟು ಸುಳ್ಳು ಹೇಳುವಂತೆ ಮಾಡುತ್ತದೆ. ಅವರು ಸಾಹಸ ಪ್ರವೃತ್ತಿಯನ್ನು ಹೊಂದಿರುತ್ತಾರೆ. ಇತರರನ್ನು ಮೆಚ್ಚಿಸಲು, ಅವರು ಸತ್ಯವನ್ನು ಬಹಿರಂಗವಾಗಿ ಹೇಳುವ ಬದಲು ಕಾಲ್ಪನಿಕ ಕಥೆಗಳೊಂದಿಗೆ ಹೇಳಲು ಒಲವು ತೋರುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ ವಿಜಯವಾಣಿ ಡಾಟ್ ನೆಟ್ ಜವಾಬ್ದಾರರಾಗಿರುವುದಿಲ್ಲ.