ಸಿದ್ದರಾಮಯ್ಯ ಅವರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ

cm siddaramaiah
Published on

5 ಸಾವಿರ ಕೋಟಿ ರೂ.ಹಗರಣ ಎಂದು ಹಲವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿಗಳು 14 ಸೈಟ್ ವಾಪಾಸ್ ಕೊಟ್ಟ ಮೇಲೆ 5 ಸಾವಿರ ಕೋಟಿ ರೂ. ಹಗರಣ ಎಲ್ಲಿ ಹೋಯ್ತು. ಮುಡಾದಲ್ಲಿ ದೊಡ್ಡ ಮಟ್ಟದ ಹಗರಣ ಆಗಿದ್ದರೆ ಪಟ್ಟಿ ಬಿಡುಗಡೆ ಮಾಡಬೇಕು. ಸಿದ್ದರಾಮಯ್ಯ ಅವರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ದೂರಿದರು.

ಇದು ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ ಅವರು ನೆನ್ನೆ ವರುಣ ಕ್ಷೇತ್ರದಲ್ಲಿ ಭಾವುಕರಾಗಿ ಭಾಷಣ ಮಾಡಿದರು. ಇದುವರೆಗೂ ಸ್ವಂತ ಮನೆ ಕಟ್ಟಿಕೊಳ್ಳಲಿಕ್ಕೆ ಆಗಿಲ್ಲ ಅವರು. ಇಡೀ ಕಾಂಗ್ರೆಸ್ ಸಿದ್ದರಾಮಯ್ಯ ಅವರಿಗೆ ಬಂಡೆಯಂತೆ ನಿಲ್ಲುತ್ತದೆ ಎಂದರು.

ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಅವರು ಇದುವರೆಗೂ ಒಂದೇ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ. ಕುಮಾರಸ್ವಾಮಿ ಅವರದು ಹಿಟ್ ಅಂಡ್ ರನ್ ಕೆಲಸ. ಅವರು ಒಕ್ಕಲಿಗ ನಾಯಕರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇದನ್ನೇ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ಮತ ನೀಡುವ ಮೂಲಕ ಚನ್ನಪಟ್ಟಣ ಕ್ಷೇತ್ರದ ಜನತೆ ಕುಮಾರಸ್ವಾಮಿಯವರಿಗೆ ಪಾಠ ಕಲಿಸುತ್ತಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net