ಮಹಿಳೆಯರ ನೈಟಿ ಧರಿಸಿ ಆಂಬ್ಯುಲೆನ್ಸ್‌ನಲ್ಲಿ ಬಂದ ಕಳ್ಳರು! ಗ್ಯಾಸ್ ಕಟರ್‌ನಿಂದ SBI ಎಟಿಎಂ ದರೋಡೆ | SBI ATM Robbery

ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯರ ನೈಟಿ ಧರಿಸಿ ಆಂಬ್ಯುಲೆನ್ಸ್‌ನಲ್ಲಿ ಬಂದ ಮೂವರು ಕಳ್ಳರು, ಗ್ಯಾಸ್ ಕಟರ್ ಬಳಸಿ ಎಸ್‌ಬಿಐ ಎಟಿಎಂ ಯಂತ್ರವನ್ನು ಕತ್ತರಿಸಿ ಹಣ ದೋಚಿದ್ದಾರೆ. ಈ ಘಟನೆಯಲ್ಲಿ ಸುಮಾರು 25ರಿಂದ 30 ಲಕ್ಷ ರೂಪಾಯಿ ಕಳವಾಗಿರುವ ಶಂಕೆ ವ್ಯಕ್ತವಾಗಿದೆ.
Telangana ATM Robbery
ಮಹಿಳೆಯರ ನೈಟಿ ಮತ್ತು ಮುಖವಾಡ ಧರಿಸಿ ಬಂದ ಮೂವರು ಕಳ್ಳರು.
Published on: 

Telangana ATM Robbery: ತೆಲಂಗಾಣದಲ್ಲಿ ವಿಚಿತ್ರ ರೀತಿಯಲ್ಲಿ ಎಟಿಎಂ ದರೋಡೆ ನಡೆದಿದೆ. ಮಹಿಳೆಯರ ನೈಟಿ ಧರಿಸಿ, ಆಂಬ್ಯುಲೆನ್ಸ್‌ನಲ್ಲಿ ಬಂದ ಮೂವರು ಕಳ್ಳರು ಗ್ಯಾಸ್ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ ಲಕ್ಷಾಂತರ ರೂಪಾಯಿ ದೋಚಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾಮಾರೆಡ್ಡಿ ಜಿಲ್ಲೆಯ ಗಾಂಧಾರಿ ಮಂಡಲದ ಕೇಂದ್ರ ಕಚೇರಿ ವ್ಯಾಪ್ತಿಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಮಹಿಳೆಯರ ನೈಟಿ ಮತ್ತು ಮುಖವಾಡ ಧರಿಸಿ ಆಂಬ್ಯುಲೆನ್ಸ್‌ನಲ್ಲಿ ಬಂದ ಮೂವರು ಕಳ್ಳರು, ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರವನ್ನು ಕತ್ತರಿಸಿ ಅದರಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು 25ರಿಂದ 30 ಲಕ್ಷ ರೂಪಾಯಿ ಕಳವಾಗಿರುವ ಶಂಕೆ ವ್ಯಕ್ತವಾಗಿದೆ.

ನೈಟಿ ಧರಿಸಿ ಬಂದ ಕಳ್ಳರು

ಭಾನುವಾರ ಬೆಳಗ್ಗೆ ಎಟಿಎಂ ಯಂತ್ರ ಜಖಂಗೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಆರಂಭಿಸಿದ್ದಾರೆ. ನೈಟಿ ಧರಿಸಿ ಆಂಬ್ಯುಲೆನ್ಸ್‌ನಲ್ಲಿ ಬಂದ ಕಳ್ಳರ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಮಂಗಳನ ಅಂಗಳದಲ್ಲಿ ಕೆಲವೇ ಕ್ಷಣದಲ್ಲಿ ನಾಪತ್ತೆಯಾಗುವ ಮೋಡದ ರಹಸ್ಯವೇನು? ಪತ್ತೆಹಚ್ಚಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲವೇ? Mars

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಕಳವಾದ ಹಣದ ನಿಖರ ಮೊತ್ತ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net