‘ಹೈ’ ಮೆಟ್ಟಿಲೇರಿದ ತಿಮ್ಮರೋಡಿ

highcourt
Published on

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಬ್ರಹ್ಮಾವರ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣಾ ಪೊಲೀಸರು ಮತ್ತು ಪ್ರಕರಣದ ದೂರದಾರ ರಾಜೀವ್ ಕುಲಾಲ್ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದ್ದು, ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ. ಪ್ರಕರಣದ ದೂರುದಾರ ರಾಜೀವ್ ಕುಲಾಲ್ ಅವರಿಗೂ ಎ್ಐಆರ್ ದಾಖಲಿಸಿದ ವಿಷಯಕ್ಕೂ ಸಂಬಂಧವಿಲ್ಲ. ಆತನ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿಲ್ಲ.

ಮೂರನೇ ವ್ಯಕ್ತಿ ಬಿ.ಎಲ್.ಸಂತೋಷ್ ಪರವಾಗಿ ಕುಲಾಲ್ ದೂರು ದಾಖಲಿಸಿದ್ದಾರೆ ಎಂದು ತಿಮರೋಡಿ ಆಕ್ಷೇಪಿಸಿದ್ದಾರೆ. ದೂರು ದಾಖಲಾದ ತಕ್ಷಣವೇ ಪೊಲೀಸರು ಪತ್ನಿಗೆ ಮೊದಲ ನೋಟಿಸ್ ನೀಡಿದ್ದಾರೆ. ನಂತರ 2ನೇ ನೋಟಿಸ್ ನೀಡಿದ್ದಾರೆ. ಈ ಎರಡೂ ನೋಟಿಸ್ ನೀಡುವಾಗ ನಿಗದಿತ ನಿಯಮಗಳನ್ನು ಪಾಲಿಸಿಲ್ಲ. ಈ ಎಲ್ಲ ಅಂಶ ಪರಿಗಣಿಸಿ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net