

ಉಗಾಂಡಾ: 12 ನೇ ವಯಸ್ಸಿನಲ್ಲಿ ವಿವಾಹವಾದ ಮಹಿಳೆಯೊಬ್ಬರು 40 ವರ್ಷ ವಯಸ್ಸಾಗುವ ಹೊತ್ತಿಗೆ 44 ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಉಗಾಂಡಾ ಮೂಲದ ಮರಿಯಮ್ ನಬಟಾಂಜಿ ಎಂಬ ಮಹಿಳೆ ಉಗಾಂಡಾದ ತಾಯಿ ಎಂದೇ ಖ್ಯಾತಿ ಪಡೆದಿದ್ದಾರೆ. ಈಕೆಗೆ 12 ನೇ ವಯಸ್ಸಿನಲ್ಲಿ ವಿವಾಹವಾಗಿತ್ತು. 13ನೇ ವಯಸ್ಸಲ್ಲಿ ಮೊದಲ ಬಾರಿ ಅವಳಿ ಮಕ್ಕಳಿಗೆ ಜನ್ಮ ನೀಡಿದಳು. ಹೀಗೆ 36 ವರ್ಷಕ್ಕೆ ಕಾಲಿಡುವ ಹೊತ್ತಿಗೆ, ಮರಿಯಮ್ 42 ಮಕ್ಕಳಿಗೆ ಜನ್ಮ ನೀಡಿದ್ದರು. ಇದೀಗ 40 ವರ್ಷ ವಯಸ್ಸಾಗುವ ಹೊತ್ತಿಗೆ ಅವರು 44 ಮಕ್ಕಳ ತಾಯಿಯಾಗಿದ್ದಾರೆ.
ನಾಲ್ಕು ಬಾರಿ ಅವಳಿ ಮಕ್ಕಳು, ಐದು ಬಾರಿ ತ್ರಿವಳಿ ಮತ್ತು ಐದು ಬಾರಿ ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದರು. ತನ್ನ ಮಕ್ಕಳ ಪೈಕಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಮರಿಯಮ್ ಗಿರುವ 38 ಮಕ್ಕಳಲ್ಲಿ 20 ಗಂಡು 18 ಹೆಣ್ಣು ಮಕ್ಕಳಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್
ಮರಿಯಮ್ ವೈದ್ಯರನ್ನು ಭೇಟಿ ಮಾಡಿದಾಗ, ಆಕೆ ಅಸಹಜವಾಗಿ ದೊಡ್ಡ ಅಂಡಾಶಯಗಳನ್ನು ಹೊಂದಿದ್ದು, ಇದು ಹೈಪರ್ ಓವ್ಯುಲೇಷನ್ ಎಂಬ ಸ್ಥಿತಿಗೆ ಕಾರಣವಾಯಿತು. ಇಂತವರಿಗೆ ಗರ್ಭನಿರೋಧಕ ಮಾತ್ರೆಗಳು ಕೆಲಸ ಮಾಡುವುದಿಲ್ಲ. ತೀವ್ರ ಆರೋಗ್ಯ ಪರಿಸ್ಥಿತಿಗಳನ್ನು ಉಂಟುಮಾಡಬಹುದು ಎಂದು ಆಕೆಗೆ ವೈದ್ಯಕೀಯ ತಜ್ಞರು ತಿಳಿಸಿದ್ದರು.
ಪತಿ ಈ ಕುಟುಂಬದಿಂದ ಹೊರನಡೆದ ನಂತರ ಮರಿಯಮ್ ಆಕೆ ತನ್ನೆಲ್ಲಾ ಮಕ್ಕಳನ್ನು ಒಬ್ಬಂಟಿಯಾಗಿ ಬೆಳೆಸಬೇಕಾಗಿದೆ. ಮಕ್ಕಳ ಜವಾಬ್ದಾರಿಯನ್ನು ಹೊತ್ತುಕೊಂಡು ಮಕ್ಕಳ ಪೋಷಣೆ ಮಾಡುತ್ತಿದ್ದಾರೆ.