ಜನರಲ್ಲಿ ತೀವ್ರ ಭಯ ಹುಟ್ಟಿಸಿದೆ ಈ ಹೆಜ್ಜೆ ಗುರುತು; ಅಧಿಕಾರಿಗಳಿಂದ ಪರಿಶೀಲನೆ

Hejjegurutu 27 May 20
Published on

ವಿಜಯಪುರ: ಇಲ್ಲಿನ ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಹಾಗೂ ಸುತಗುಂಡಿ ಪುನರ್ವಸತಿ ಕೇಂದ್ರದ ಬಳಿ ಕಂಡುಬಂದ ಹೆಜ್ಜೆಗುರುತು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಸ್ಥಳಕ್ಕೆ ಆಗಮಿಸಿದ್ದ ವಿಜಯಪುರ ವಲಯ ಅರಣ್ಯಾಧಿಕಾರಿ ಪ್ರಭು ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಅದು ಯಾವುದರ ಹೆಜ್ಜೆ ಎಂಬ ಬಗ್ಗೆಯೇ ಚರ್ಚೆ ನಡೆಯುತ್ತಿದೆ.

ಎಮ್ಮೆ ಹಾಗೂ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ. ಅದು ಚಿರತೆಯದ್ದೇ ಹೆಜ್ಜೆಗುರುತು. ಒಂದಷ್ಟು ಜನ ಚಿರತೆಯನ್ನು ನೋಡಿ ಜೋರಾಗಿ ಕೂಗಿಕೊಂಡಿದ್ದಾರೆ. ಕೂಗು ಕೇಳಿ ಅದು ಓಡಿ ಹೋಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅಲ್ಲದೆ, ಕೂಡಲೇ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸುತ್ತಿದ್ದಾರೆ.

ಆದರೆ ಅಧಿಕಾರಿಗಳು ಮಾತ್ರ ಇದು ಚಿರತೆಯದ್ದು ಅಲ್ಲವೇ ಅಲ್ಲ. ಕತ್ತೆ ಕಿರುಬ ಬಂದಿರುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ. ಅಲ್ಲಿ ಮೂಡಿರುವ ಹೆಜ್ಜೆ ಚಿರತೆಯದ್ದಾ? ಕತ್ತೆ ಕಿರುಬಂದಾ ಎಂಬ ಪರಿಶೀಲನೆ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net