

ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ 'ಲಿಯೋ' ಚಿತ್ರ ಇಂದು ಬಹುತೇಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡಿತು. ಸಿನಿಮಾವನ್ನು ಸಂಭ್ರಮಿಸುತ್ತಿರುವ ಫ್ಯಾನ್ಸ್ಗೆ ಇದೀಗ ಮತ್ತೊಂದು ಸಿಹಿ ಸುದ್ದಿಯೊಂದು ಲಭಿಸಿದೆ.
ಲೋಕೇಶ್ ಕನಕರಾಜ್ ನಿರ್ದೇಶನದ ಆಕ್ಷನ್-ಡ್ರಾಮಾ ಜಾನರ್ನ 'ಲಿಯೋ' 2023 ರಲ್ಲಿ ಭಾರತೀಯ ಚಿತ್ರರಂಗದಲ್ಲಿ ಅತಿದೊಡ್ಡ ಓಪನಿಂಗ್ ಪಡೆದ ಚಿತ್ರವಾಗಿ ಹೊರಹೊಮ್ಮಿದೆ. ಸದ್ಯ ಈ ಚಿತ್ರದ ಡಿಜಿಟಲ್ ಹಕ್ಕಗಳನ್ನು ಇದೀಗ ನೆಟ್ಫ್ಲಿಕ್ಸ್ ಅಧಿಕೃತವಾಗಿ ಪಡೆದುಕೊಂಡಿದೆ.
ಲೋಕೇಶ್ ಸಿನೆಮ್ಯಾಟಿಕ್ ಯೂನಿವರ್ಸ್ (LCU) ಭಾಗವಾಗಿರುವ 'ಲಿಯೋ' ಚಿತ್ರದಲ್ಲಿ ಸಂಜಯ್ ದತ್, ಅರ್ಜುನ್, ಗೌತಮ್ ಮೆನನ್, ಮನ್ಸೂರ್ ಅಲಿ ಖಾನ್, ಪ್ರಿಯಾ ಆನಂದ್ ಮುಂತಾದವರ ತಾರಾಗಣವಿದೆ. ಸೆವೆನ್ ಸ್ಕ್ರೀನ್ ಸ್ಟುಡಿಯೋದಡಿ ಎಸ್.ಎಸ್. ಲಲಿತ್ ಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಖ್ಯಾತ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ,(ಏಜೆನ್ಸೀಸ್).