

ಸಿಕ್ಕಿಂ: ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಸರ್ಕಾರವು, ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಮತ್ತು ಮಗುವಿನ ತಂದೆಗೆ ಒಂದು ತಿಂಗಳ ಪಿತೃತ್ವ ರಜೆ ನೀಡಲಿದೆ.
ಸಿಕ್ಕಿಂ ರಾಜ್ಯ ನಾಗರಿಕ ಸೇವಾ ಅಧಿಕಾರಿಗಳ ಸಂಘದ (ಎಸ್ಎಸ್ಸಿಎಸ್ಒಎ) ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು, ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳು ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ ಒಂದು ತಿಂಗಳ ಪಿತೃತ್ವ ರಜೆ ನೀಡಲಿದ್ದೇವೆ. ಈ ಪ್ರಯೋಜನವನ್ನು ಒದಗಿಸಲು ಸೇವಾ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗುವುದು. ಈ ಪ್ರಯೋಜನವು ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಮತ್ತು ಕುಟುಂಬವನ್ನು ಉತ್ತಮವಾಗಿ ನೋಡಿಕೊಳ್ಳಲು ಸಹಾಯ ಮಾಡುತ್ತದೆ. ಶಿಘ್ರವೇ ಈ ನಿಯಮ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.
ಹೆರಿಗೆ ಯೋಜನ ಕಾಯಿದೆ 1961ರ ಪ್ರಕಾರ, ಕೆಲಸ ಮಾಡುವ ಮಹಿಳೆಯು 6 ತಿಂಗಳು ಅಥವಾ 26 ವಾರಗಳ ವೇತನ ಸಹಿತ ಹೆರಿಗೆ ರಜೆಗೆ ಅರ್ಹಳಾಗಿದ್ದಾಳೆ. ಹಿಮಾಲಯನ್ ರಾಜ್ಯವು ಭಾರತದಲ್ಲಿ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ, ಸುಮಾರು 6.32 ಲಕ್ಷ ಮಂದಿ ವಾಸವಾಗಿದ್ದಾರೆ. ಹೀಗಾಗಿ ಸಿಕ್ಕಿಂ ಸರ್ಕಾರವು ಜನರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದೆ. ಅಧಿಕಾರಿಗಳು ರಾಜ್ಯದ ಆಡಳಿತದ ಬೆನ್ನೆಲುಬು ಎಂದು ಶ್ರೀ ತಮಾಂಗ್ ಹೇಳಿದ್ದಾರೆ.
ನಾಗರಿಕ ಸೇವಾ ಅಧಿಕಾರಿಗಳಿಗೆ ಬಡ್ತಿ ಪ್ರಕ್ರಿಯೆ ಚುರುಕುಗೊಳಿಸುವತ್ತ ಗಮನ ಹರಿಸಲಾಗಿದ್ದು, ಬಡ್ತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಈ ಹೊಸ ಯೋಜನೆ ಕುರಿತಾಗಿ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.