

ತೆಲಂಗಾಣ: ಬಿಸಿಲಿನ ಬೇಗೆಯಿಂದ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳಿಗೆ ಎದುರಾಗುವ ತೊಂದರೆಯನ್ನು ತಪ್ಪಿಸಲು ಇದೀಗ ತೆಲಂಗಾಣ ರಾಜ್ಯ ಶಿಕ್ಷಣ ಇಲಾಖೆ ಮಾರ್ಚ್ 15ರಿಂದ ಅರ್ಧ ದಿನ ಮಾತ್ರ ಶಾಲೆಯನ್ನು ನಡೆಸಲು ನಿರ್ಧರಿಸಿದೆ. ಈ ಕುರಿತು ಅಧಿಕೃತವಾಗಿ ಘೋಷಿಸಿರುವ ಸರ್ಕಾರ, ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಅರ್ಧ ದಿನ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.
ಈ ವೇಳಾಪಟ್ಟಿ ಹೊಂದಾಣಿಕೆಯು ಮಾರ್ಚ್ 15ರಿಂದ ಏಪ್ರಿಲ್ 23 ರವರೆಗೆ ಜಾರಿಯಲ್ಲಿರುತ್ತದೆ. ತರಗತಿಗಳು ಬೆಳಿಗ್ಗೆ 8ರಿಂದ ಮಧ್ಯಾಹ್ನ 12:30 ರವರೆಗೆ ಮಾತ್ರ ನಡೆಯುತ್ತವೆ ಎಂದು ಹೇಳಿದೆ. ಬಿಸಿಲ ಬೇಗೆಯಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗಬಹುದು ಎಂದು ಮುಂದಾಲೋಚಿಸಿ, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳ ಯೋಗಕ್ಷೇಮ ಮತ್ತು ಸೌಕರ್ಯಗಳಿಗೆ ಆದ್ಯತೆ ನೀಡುವುದು ಈ ನಿರ್ಧಾರದ ಉದ್ದೇಶವಾಗಿದೆ.
ಈ ನಿರ್ಧಾರವು ಹೆಚ್ಚುತ್ತಿರುವ ತಾಪಮಾನದ ಪರಿಣಾಮವನ್ನು ತಗ್ಗಿಸಲು ಮತ್ತು ಶಿಕ್ಷಣ ಕ್ಷೇತ್ರದ ಎಲ್ಲರಿಗೂ ಹೆಚ್ಚು ಅನುಕೂಲಕರವಾದ ಕಲಿಕೆಯ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ,(ಏಜೆನ್ಸೀಸ್).