

ಬೆಂಗಳೂರು: ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರದಿಂದ ಆರಂಭಿಸಿದೆ. ಮೊದಲ ದಿನ 3,738 ಅರ್ಜಿಗಳು ಸಲ್ಲಿಕೆಯಾಗಿವೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅವರ ಮಾಹಿತಿ ದುಬರ್ಳಕೆ ತಡೆಯುವ ಉದ್ದೇಶದಿಂದ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಪ್ರತಿಹಂತದಲ್ಲಿಯೂ ಒಟಿಪಿ ಹಾಗೂ ಮುಖ ಚಹರೆಯ ದೃಢೀಕರಣದ ನಂತರವೇ ಅರ್ಜಿಗೆ ಲಾಗಿನ್ ಮಾಡಬೇಕಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಇರುವ ಮಾಹಿತಿ ಪುಸ್ತಕವನ್ನು ಓದಿ, ಮನನ ಮಾಡಿಕೊಂಡ ನಂತರವೇ ಭರ್ತಿ ಮಾಡಬೇಕು. ಂಜಿನಿಯರಿಂಗ್ ಅಲ್ಲದೆ, ನೀಟ್ (ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್‌ಗಳ) ಮೂಲಕ ಪ್ರವೇಶ ಬಯಸುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಮೊದಲ ದಿನದ ಅರ್ಜಿ ಸಲ್ಲಿಕೆಯು ಯಶಸ್ವಿಯಾಗಿ ಆರಂಭವಾಗಿದೆ ಎಂದು ತಿಳಿಸಿದ್ದಾರೆ.