

ಬೆಂಗಳೂರು: 2024-25 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯ ಸರ್ಕಾರ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್.ಕೆ. ಕಾಂತ ಅವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ 20 ರಂದು ಆಚರಿಸಲಾಗುತ್ತಿದೆ.
ಬುಧವಾರ ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.
ಈ ಪ್ರಶಸ್ತಿಯು ರೂ.5.00 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಸ್. ಕೆ .ಕಾಂತ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆʼ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.