ರೈಲು ದುರಂತಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಿಡುವ ಮಾತಿಲ್ಲ: ಪ್ರಧಾನಿ ಮೋದಿ

PM Modi (1)
Published on

ಒಡಿಶಾ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.

ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿರು ಗಾಯಗೊಂಡಿದ್ದು ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಬಳಿಕ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ತಪ್ಪಿತಸ್ಥರನ್ನು ಬಿಡುವ ಮಾತಿಲ್ಲ

ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಿಂದ ಅತೀವ್ ದುಃಖವಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ಹೇಳಿದ್ಧಾರೆ.

ರೈಲು ಅಪಘಾತ ಒಂದು ಗಂಭೀರ ಘಟನೆಯಾಗಿದ್ದು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು ರೈಲ್ವೆ ಇಲಾಖೆಯೂ ಹಳಿಯ ರಿಪೇರಿ ಕಾರ್ಯ ಶುರು ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ ಗಾಯಾಳುಗಳ ಭೇಟಿ ಬಳಿಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net