ವಿರೋಧ ಪಕ್ಷದಲ್ಲಿ ಕೂತವರು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತಾಡ್ತಾರೆ; CM ಸಿದ್ದರಾಮಯ್ಯ ವಾಗ್ದಾಳಿ

dk-2025-02-21t191246437-67b882ff3aa8d
Published on

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸುತ್ತಿದ್ದಾಗ ನಮ್ಮ ಆರ್ಥಿಕ ವ್ಯವಸ್ಥೆಯನ್ನು ಪಾತಾಳಕ್ಕೆ ಕುಸಿಯುವಂತೆ ಮಾಡಿದ್ದರು. ಆದರೆ ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಬಿಜೆಪಿ ನಾಯಕ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿಎಂ, ಬಿಜೆಪಿಯವರ ಅರಾಜಕ ಆರ್ಥಿಕ ನಿರ್ವಹಣೆಗಳಿಂದಾಗಿ ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದನ್ನು ಸಹಿಸಿಕೊಳ್ಳಲಾಗದೆ ಅಥವಾ ಅರಿತುಕೊಳ್ಳಲಾರದೆ ಬಿಜೆಪಿಯವರು ಮಾತಾಡುತ್ತಿರುವುದು ದುರಂತವೆಂದು ಸರ್ಕಾರವು ಭಾವಿಸುತ್ತದೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿರೋಧ ಪಕ್ಷದ ನಾಯಕರು ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡಿದ್ದಾರೆನ ಎಂದು ಕಿಡಿಕಾರಿರುವ ಸಿಎಂ, ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ. ಹಣಕಾಸಿನ ವ್ಯವಸ್ಥೆ ನೆಲ ಕಚ್ಚಿದೆ ಎಂದೆಲ್ಲ ಆರೋಪಿಸಿದ್ದು, ಈ ಮೂಲಕ ಜನರನ್ನು ಸಶಕ್ತಗೊಳಿಸುತ್ತಿರುವ ಮತ್ತು ಗ್ಯಾರಂಟಿ ಹಾಗೂ ಇನ್ನಿತರೆ ಯೋಜನೆಗಳನ್ನು ಟೀಕಿಸಿದ್ದಾಗಿ ಹೇಳಿ ಬಿಜೆಪಿ ನಾಯಕರನ್ನು ತರಾಟೆಗೆ ತಗೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net