ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಕಣ್ಣೀರು ಹಾಕಿಸುವಂತೆ ಮಾಡಿದ್ರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಎಚ್​.ಡಿ.ದೇವೇಗೌಡ

Devegowda
Published on

ಮಧುಗಿರಿ: 'ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಮಧುಗಿರಿಯ ಜನತೆ ಕಣ್ಣೀರು ಹಾಕುವಂತೆ ಮಾಡಿದಾಗ ಮಾತ್ರ ನನ್ನ ಆತ್ಮಕ್ಕೆ ಶಾಂತಿ'
- ಹೀಗೆಂದು ಹೇಳುವ ಮೂಲಕ ಚುನಾವಣೆಯ ಪ್ರಚಾರ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭಾವನಾತ್ಮಕ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

ಮಧುಗಿರಿ ಕೈಮರದಲ್ಲಿ ಸೋಮವಾರ ಜೆಡಿಎಸ್ ಅಭ್ಯರ್ಥಿ ಎಂ.ವಿ. ವೀರಭದ್ರಯ್ಯ ಪರ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ ಅವರು, ನನ್ನನ್ನು ಮುಖ್ಯಮಂತ್ರಿ ಮಾಡಲು ಯಾವ ತುಮಕೂರಿನಲ್ಲಿ 11 ಸೀಟ್ ಗೆಲ್ಲಿಸಿಕೊಟ್ಟಿರೋ ಅಲ್ಲೇ ಮತ್ತೆ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿ ಎಂದು ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ ಎಂದರು.

ಯಾವ ದೇವೇಗೌಡ ಪಾರ್ಲಿಮೆಂಟ್​ನಲ್ಲಿ ನಿಂತು ಕಣ್ಣೀರು ಹಾಕುವ ಕೆಟ್ಟ ಸಂದರ್ಭ ತಂದರೋ ಆ ನಾಯಕರ ಕಣ್ಣಲ್ಲಿ ನೀರು ಬರಿಸಬೇಕು. ಆವತ್ತು ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಭಾವುಕರಾಗಿ ನುಡಿದ ದೇವೇಗೌಡರು ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಅವರನ್ನು ಸೋಲಿಸಲು ಪರೋಕ್ಷವಾಗಿ ಕರೆಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net