ಸ್ವಾಮೀಜಿಗೆ ಪಿಎಫ್​​ಐನಿಂದ ಜೀವ ಬೆದರಿಕೆ; ಕೇಂದ್ರ ಸರ್ಕಾರದಿಂದ ವೈ ಕೆಟಗರಿ ಭದ್ರತೆ

Swamiji
Published on

ಮಂಡ್ಯ: ಜಿಲ್ಲೆಯ ಮೇಲುಕೋಟೆಯ ಯದುಗಿರಿ ಮಠದ ಪೀಠಾಧ್ಯಕ್ಷ ಶ್ರೀ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿಯವರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸಂಘಟನೆ ಜೀವ ಬೆದರಿಕೆ ಹಾಕಿದೆ ಎನ್ನಲಾಗಿದ್ದು, ಸ್ವಾಮೀಜಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.

ಸ್ವಾಮೀಜಿಯವರ ನೇತೃತ್ವದಲ್ಲಿ ನಾಲ್ಕೈದು ತಿಂಗಳ ಹಿಂದೆ ಕಾಶ್ಮೀರದಲ್ಲಿ ರಾಮಾನುಜಾಚಾರ್ಯರ ಪ್ರತಿಮೆ ನಿರ್ಮಾಣ ನಡೆದಿತ್ತು. ಆ ಬಳಿಕ ಸ್ವಾಮೀಜಿಯವರಿಗೆ ಪಿಎಫ್​ಐ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ.

ಸ್ವಾಮೀಜಿ ಸದ್ಯ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಶಾಖಾ ಮಠದಲ್ಲಿದ್ದು, ಕೇಂದ್ರ ಸರ್ಕಾರವು ಅವರಿಗೆ ವೈ ಕೆಟಗರಿ ಭದ್ರತೆಯನ್ನು ನೀಡಿ, ನಿಗಾ ವಹಿಸಿದೆ. ಆ ಮೂಲಕ ಮಠದವರು ಹಾಗೂ ಭಕ್ತರಿಗೆ ಇರುವ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net