BJP MLA ಮುನಿರತ್ನ ಮೇಲೆ ದಾಳಿ; ಮೂವರು ಆರೋಪಿಗಳಿಗೆ ಜಾಮೀನು

Munirathna
Published on

ಬೆಂಗಳೂರು: ರಾಜಾರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ (BJP MLA) ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಚಂದ್ರು, ವಿಶ್ವನಾಥ್, ಕೃಷ್ಣಮೂರ್ತಿಗೆ ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ರಾಜಾರಾಜೇಶ್ವರಿನಗರ ಕ್ಷೇತ್ರದ ಲಕ್ಷ್ಮೀದೇವಿ ನಗರದಲ್ಲಿ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​ ನಡುವಿನ ಕೆಸರೆರಚಾಟಕ್ಕೆ ಆಸ್ಪದ ಮಾಡಿಕೊಟ್ಟಿದ್ದು, ಡಿಕೆ ಶಿವಕುಮಾರ್​, ಕುಸುಮಾ ರವಿ ವಿರುದ್ಧ ಮುನಿರತ್ನ ಕೊಲೆ ಆರೋಪ ಮಾಡಿದ್ದರು.

ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್​ ಪೊಲೀಸರು ಚಂದ್ರು, ವಿಶ್ವನಾಥ್, ಕೃಷ್ಣಮೂರ್ತಿ ಎಂಬುವವರನ್ನು ಬಂಧಿಸಿದ್ದರು. ಈ ಸಂಬಂಧ ಶಾಸಕ ಮುನಿರತ್ನ ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಸೇರಿದಂತೆ  150 ಜನರ ಹೆಸರನ್ನು ಉಲ್ಲೇಖಿಸಿ ದೂರು ದಾಖಲಿಸಿದ್ದಾರೆ. ಈ ಸಂಬಂಧ FIR ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net