

ನವಾಡ: ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದ ಮೆರವಣಿಗೆಯೊಂದರಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ಧಮೌಲಾ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯಲ್ಲಿ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿಸುತ್ತಿರುವ ವಿಡಯೋವೊಂದು ಹರಿದಾಡಿತ್ತು ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ, ಪಕ್ರಿಬರವನ್, ಮಹೇಶ್ ಚೌಧರಿ ಪಿಟಿಐಗೆ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಪೊಲೀಸರು ತನಿಖೆ ನಡೆಸಿಸ ಮೆರವಣಿಗೆಯ ವೇಳೆ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯದೆ ಮೆರವಣಿಗೆ ನಡೆಸಲಾಗಿದೆ. ಪ್ಯಾಲೆಸ್ತೀನ್ ಧ್ವಜವನ್ನು ತಕ್ಷಣವೇ ವಶಪಡಿಸಿಕೊಳ್ಳಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ.
ಇದಕ್ಕೂ ಮೊದಲು, ಜುಲೈ 13 ರಂದು ಬಿಹಾರದ ದರ್ಬಂಗಾ ಜಿಲ್ಲೆಯಲ್ಲಿ ಮೊಹರಂಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಬಿಹಾರದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು.