ವ್ಹೀಲಿಂಗ್ ಮಾಡುತ್ತಿದ್ದ ಮೂವರ ಸೆರೆ

Crime Logo
Published on

ಬೆಂಗಳೂರು: ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ಕೆ.ಆರ್.ಪುರ ಸಂಚಾರ ಠಾಣೆ ಪೊಲೀಸರು, ಅಪ್ರಾಪ್ತ ಸೇರಿ ಮೂವರು ಸವಾರರನ್ನು ವಶಕ್ಕೆ ಪಡೆದು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಭಟ್ಟರಹಳ್ಳಿ ಮತ್ತು ಟಿ.ಸಿ.ಪಾಳ್ಯ ಮುಖ್ಯರಸ್ತೆಗಳಲ್ಲಿ ಪೊಲೀಸರು ಗಸ್ತು ಮಾಡುವಾಗ ಮೂವರು ದ್ವಿಚಕ್ರ ವಾಹನ ಸವಾರರು ವ್ಹೀಲಿಂಗ್ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಮೂವರನ್ನು ವಶಕ್ಕೆ ಪಡೆದು ಮೂರು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂವರು ಸವಾರರ ಪೈಕಿ ಇಬ್ಬರು ವಯಸ್ಕರಾಗಿದ್ದು, ಪ್ರತ್ಯೇಕ ಪ್ರಕರಣ ದಾಖಸಲಾಗಿದೆ. ಮತ್ತೋರ್ವ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ಆತನ ಪಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net