

ನವದೆಹಲಿ: ನವದೆಹಲಿಯಲ್ಲಿ ಭಾರಿ ಮಳೆಯಿಂದ ಪ್ರವಾಹದ ಭೀತಿ ಎದುರಾಗಿದ್ದು, ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಈ ವೇಳೆ ಪ್ರವಾಹದಲ್ಲಿ ಈಜುಲು ಯತ್ನಿಸಿದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನಿರಂತರ ಮಳೆಯ ಆರ್ಭಟಕ್ಕೆ ಯಮುನಾ ನದಿಯು ಮೈದುಂಬಿ ಹರಿಯುತ್ತಿದೆ. ರಸ್ತೆಗಳು ಜಲಾವೃತಗೊಂಡ ಕಾರಣ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈಶಾನ್ಯ ದೆಹಲಿಯ ಮುಕುಂದಪುರ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈಜಲು ಹೋದ ಮೂವರು ಮಕ್ಕಳು ಪ್ರವಾಹದಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಕಂದಾಯ ಸಚಿವ ಅತಿಶಿ, ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ದೆಹಲಿಯ ಪ್ರದೇಶಗಳಿಗೆ ಪ್ರವಾಹ ನೀರು ಪ್ರವೇಶಿಸುವುದನ್ನು ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಸೇನೆಯಿಂದ ಸಹಾಯ ಪಡೆಯುವಂತೆ ಸೂಚನೆ ನೀಡಿದರು,(ಏಜೆನ್ಸೀಸ್).