ಮೂರು ದಿನ ಮದ್ಯ ಮಾರಾಟ ನಿಷೇಧ

liquor bar
Published on

ಬೆಳಗಾವಿ: ಬೆಳಗಾವಿ ನಗರ ಹಾಗೂ ತಾಲೂಕಿನಾದ್ಯಂತ ಅ.30 ರಂದು ಈದ್ ಮಿಲಾದ್, 31ರಂದು ವಾಲ್ಮೀಕಿ ಜಯಂತಿ ಹಾಗೂ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಮದ್ಯದ ಅಂಗಡಿಗಳಲ್ಲಿ, ವೈನ್‌ಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಅ.30ರ ಬೆಳಗ್ಗೆ 6ರಿಂದ ನ.2ರ ಸಂಜೆ 6ರ ವರೆಗೆ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆ ನಿಷೇಧಿಸಲಾಗಿದೆ ಎಂದು ಬೆಳಗಾವಿ ನಗರ ಪೋಲಿಸ್ ಆಯುಕ್ತ ಕೆ.ತ್ಯಾಗರಾಜನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net