ರೈತರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ

farmers
Published on

ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೆಪ್ಟಂಬರ್ 10 ರಿಂದ 12 ರವರೆಗೆ “ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಲ್ಲಿ ಆಧುನಿಕ ಕೃಷಿ ಪದ್ದತಿಗಳು, ಸೂಕ್ಷ್ಮ ನೀರಾವರಿ ಅಳವಡಿಕೆ, ರೋಗ ಕೀಟ ನಿರ್ವಹಣೆ ಹಾಗೂ ಮೌಲ್ಯವರ್ಧನೆ” ಎಂಬ ವಿಷಯದ ಬಗ್ಗೆ ರೈತ/ ರೈತಮಹಿಳೆಯರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

 ತರಬೇತಿಯಲ್ಲಿ ಭಾಗವಹಿಸುವ ರೈತ/ ರೈತಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಒದಗಿಸಲಾಗುವುದು. ಆಸಕ್ತ ರೈತ/ ರೈತಮಹಿಳೆಯರು ತಮ್ಮ ಹೆಸರನ್ನು ತರಬೇತಿ ಕೇಂದ್ರದ ಕೃಷಿ ಅಧಿಕಾರಿ ದೂ. ಸಂ: 8277933116 ಗೆ ಕರೆಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ರೈತರು ತರಬೇತಿಗೆ ಬರುವಾಗ FID ನಂಬರ್, ರೇಷನ್‌ಕಾರ್ಡ್, ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿಗಳನ್ನು ತಪ್ಪದೇ ತರುವುದು. ಮೈಸೂರು ಜಿಲ್ಲೆಯ 45 ರೈತ/ ರೈತಮಹಿಳೆಯರಿಗೆ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net