VIDEO| ಮೂರು ಅಂತಸ್ತಿನ ಕಟ್ಟಡ ಕುಸಿತ; ಮೂವರ ಸಾವು

vishaklapattana
Published on

ವಿಶಾಖಪಟ್ಟಣ: ಮೂರು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ರಾಮಜೋಗಿ ಪೇಟಾದಲ್ಲಿ ಸಂಭವಿಸಿದೆ.

ವಿಶಾಖಪಟ್ಟಣ ಜಿಲ್ಲಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ತಂಡ ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ : ಆಧುನಿಕ ಶ್ರವಣಕುಮಾರ; ತಾಜ್​ಮಹಲ್​ ನೋಡಲು ಸ್ಟ್ರೆಚರ್​ನಲ್ಲಿ ಅಮ್ಮನ ಕರೆತಂದ ಮಗ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net