ಬೈಕ್‌ಗೆ ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು

Three from the same family died in a collision between a lorry and a bike
Published on

ಬ್ಯಾಡಗಿ: ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವಿಗೀಡಾದ ಘಟನೆ ಮಂಗಳವಾರ ಜರುಗಿದೆ.

ತಾಲೂಕಿನ ಹಳೆಶಿಡೇನೂರು ಗ್ರಾಮದ ಆಶಿಫುಲ್ಲಾ ಮಲ್ಲಾಡದ (34), ಪತ್ನಿ ಆಫ್ರಿನಾಭಾನು (27), ಮಗ ಮಹ್ಮದರ್ಷದ್ (4) ಮೃತಪಟ್ಟವರು. ಮಗಳು ರುಕ್ಸಾರಫಾತಿಮಾ (6) ತೀವ್ರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ.

ರಾಣೆಬೆನ್ನೂರಿನಿಂದ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-4) ಮೂಲಕ ಹಳೆಶಿಡೇನೂರು ಗ್ರಾಮಕ್ಕೆ ಬರುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಪತಿ, ಪತ್ನಿ ಹಾಗೂ ಮಗ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ರುಕ್ಸಾರಫಾತಿಮಾಗೆ ಜಿಲ್ಲಾಸ್ಪತ್ರೆಯಲ್ಲಿ ಉಪಚರಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ.

ಘಟನೆ ಜರುಗಿದ ಕ್ಷಣಾರ್ಧದಲ್ಲಿ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net