

ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳಿಗೆ ಸಮವರ್ತಿತ ಪ್ರಭಾರ(Three IAS officers in charge) ಹುದ್ದೆ ನೀಡಿ ಹಾಗೂ ಒಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಏಕ್‌ರೂಪ್ ಕೌರ್(Ekroop Caur)ಅವರಿಗೆ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ, ಜೀವನೋಪ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನು ಸಮವರ್ತಿತ ಪ್ರಭಾರ ನೀಡಲಾಗಿದೆ.
ರಮಣದೀಪ್ ಚೌಧರಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ರಮಣದೀಪ್ ಚೌಧರಿ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ(ಎಂಎಸ್‌ಎಂಇ ಮತ್ತು ಮೈನ್ಸ್) ಸರ್ಕಾರದ ಕಾರ್ಯದರ್ಶಿ ಹುದ್ದೆಯನ್ನು ಸಮವರ್ತಿತ ಪ್ರಭಾರ ನೀಡಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜು ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಸಮಪ್ರಭಾರ ನೀಡಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಸ್ಥಾನಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ.