ನಟಿ ಉಮಾಶ್ರೀ ಸೇರಿದಂತೆ ಮೂವರು ಇನ್ನು ಎಂಎಲ್​​ಸಿ; ವಿಧಾನಪರಿಷತ್​ಗೆ ಮೂವರ ನಾಮನಿರ್ದೇಶನ

Umashree
Published on

ಬೆಂಗಳೂರು: ನಟಿ ಉಮಾಶ್ರೀ ಸೇರಿದಂತೆ ಮೂವರು ವಿಧಾನಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನಗೊಂಡಿದ್ದು, ರಾಜ್ಯಪಾಲರ ಅಂಕಿತವೂ ಸಿಕ್ಕಿದೆ. ಈ ಮೂಲಕ ಕಾಂಗ್ರೆಸ್​ನಿಂದ ಮೂವರು ಮೇಲ್ಮನೆಗೆ ಪ್ರವೇಶ ಪಡೆದಿದ್ದಾರೆ.

ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಸುಧಾಮ್​ದಾಸ್ ಪರಿಷತ್​ ಅವರನ್ನು ಕಾಂಗ್ರೆಸ್​ ವಿಧಾನಪರಿಷತ್​ಗೆ ನಾಮನಿರ್ದೇಶನ ಮಾಡಿದೆ. ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ.

ಇದರ ಬೆನ್ನಿಗೇ ಸುಧಾಮ್​ದಾಸ್ ನೇಮಕಕ್ಕೆ ಪಕ್ಷದ ಹಿರಿಯ ಸಚಿವರಿಂದಲೇ ವಿರೋಧ ವ್ಯಕ್ತವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಬೆಂಬಲಿತ ಸುಧಾಮ್ ದಾಸ್ ನೇಮಕಕ್ಕೆ ಹಿರಿಯ ಸಚಿವರು ಬಹಿರಂಗವಾಗಿ ಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net