ಮಾರಮ್ಮನ ಜಾತ್ರೆಗೆ ಬಂದವರು ಮಸಣಕ್ಕೆ: ಮಧುಗಿರಿಯಲ್ಲಿ ರಸ್ತೆ ಅಪಘಾತಕ್ಕೆ ಮೂವರು ಬಲಿ

Car Accident
Published on

ಮದುಗಿರಿ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ತೀವ್ರ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಘಟನೆ ತಾಲೂಕಿನ ಮಿಡಿಗೇಶಿ ಕೆಶಿಪ್ ರಸ್ತೆಯಲ್ಲಿ ರಾತ್ರಿ ನಡೆದಿದೆ.

ಪಾವಗಡ ತಾಲೂಕಿನ ಗುಜ್ಜ ನುಡು ಗ್ರಾಮದ ಆಕಾಶ್, ಕಾರ್ತಿಕ್, ಹೇಮಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಜ್ವಲ್ ತೀವ್ರ ಗಾಯಗೊಂಡು ತುಮಕೂರು ಆಸ್ಪತ್ರೆಗೆ ದಾಖಲಾಗಿದ್ದಾರೆ

ಇಂದು ಬೆಂಗಳೂರು ಬಂದ್ ಇದ್ದ ಕಾರಣ ಗ್ರಾಮದಲ್ಲಿ ನಡೆಯುತ್ತಿದ್ದ ಮಾರಮ್ಮ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಮಿಡಿಗೇಶಿ ಬಳಿ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದ ಮುಂಭಾಗದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.

ಮೃತರ ದೇಹಗಳನ್ನು ಮದುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ತರಲಾಗಿದ್ದು ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net