ಮಗಳ ಮದುವೆಗೆ ಸಾಲ ಮಾಡಿ ಪ್ರಾಣ ಬಿಟ್ಟ ಹೆತ್ತವರು; ಮನನೊಂದು ಮಗಳು ಕೂಡಾ ಪ್ರಾಣ ತ್ಯಾಗ

family ends their life
Published on

ಹಾವೇರಿ : ಸಾಲಮಾಡಿ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದ ಪಾಲಕರು. ಸಾಲಬಾಧೆ ತಾಳಲಾರದೆ ತಂದೆ, ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜೆಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಮೃತರು. ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದ ಹನುಮಂತಗೌಡ ಪಾಟೀಲ ಅವರು ಸುಮಾರು ಸುಮಾರು 25 ಲಕ್ಷರೂಪಾಯಿ ಸಾಲ ಮಾಡಿ ಮಗಳ ಮದುವೆ ಮಾಡಿದ್ದರು. ಆದರೆ ಸಾಲದ ಹಣವನ್ನು ಮರಳಿ ನೀಡಲಾಗದೆ ದಂಪತಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ನನ್ನಿಂದ ತಂದೆ, ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net