ಊಟಕ್ಕೆಂದು ಹೋದ ಮೂವರು ಮಾರ್ಗಮಧ್ಯೆ ಮಸಣ ಸೇರಿದರು, ಇಬ್ಬರ ಸ್ಥಿತಿ ಚಿಂತಾಜನಕ

car accident
Published on

ಶಿವಮೊಗ್ಗ: ಗಾಜನೂರು ಸಮೀಪದ ಸಕ್ರೆಬೈಲು ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ನಗರದ ನ್ಯೂಮಂಡ್ಲಿಯ ಐವರು ಸ್ನೇಹಿತರು ಮಂಗಳವಾರ ರಾತ್ರಿ ಊಟಕ್ಕೆಂದು ಹೊರಗಡೆ ತೆರಳಿದ್ದರು. ಊಟ ಮುಗಿಸಿಕೊಂಡು ಕಾರಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ವಾಪಸ್ ಬರುತ್ತಿದ್ದಾಗ ಸಕ್ರೆಬೈಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮರಕ್ಕೆ ಡಿಕ್ಕಿಯಾಗಿದೆ.

ಅಪಘಾತ ಸಂಭವಿಸಿದ ಸ್ಥಳದಲ್ಲೇ ಮಹಮ್ಮದ್ ಜುಬೇರ್(23), ಆಫ್ರಿದಿ(24) ಮತ್ತು ಸಮೀವುಲ್ಲಾ(25) ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಸಮೀರ್ ಹಾಗೂ ವಸಿಮುಲ್ಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ತುಂಗಾನಗರ ಠಾಣೆ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net