

ತೆಲಂಗಾಣ: ಎರಡು ಟ್ರಕ್‌ಗಳ ನಡುವೆ ಕಾರು ಸಿಲುಕಿ ನಜ್ಜುಗುಜ್ಜಾದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ವಿಪ್ಪಲಮಡಕ ನಿವಾಸಿಗಳಾದ ರಾಜೇಶ್ ಮತ್ತು ಸುಜಾತಾ ಹಾಗೂ ಅವರ ಪುತ್ರ ಅಶ್ವಿತ್ ಎಂದು ಗುರುತಿಸಲಾಗಿದೆ. ಇನ್ನು, ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಖಮ್ಮಂ ಆಸ್ಪತ್ರೆಗೆ ರವಾನಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇಂದು ಮುಂಜಾನೆ ಕಾರು ಖಮ್ಮಂ ಹತ್ತಿರದ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂದಿನ ಲಾರಿ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಮತ್ತೊಂದು ಲಾರಿ ಹಿಂದಿನಿಂದ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದು ಘಟನೆಗೆ ಕಾರಣ ಎಂದು ಪೋಲಿಸರು ತಿಳಿಸಿದ್ದಾರೆ.(ಏಜೆನ್ಸೀಸ್)