ಮೂವರು ಪಿಎಫ್​​ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ; ಸಮಾಜಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ?

PFI
Published on

ಉತ್ತರಕನ್ನಡ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಎಸ್​ಡಿಪಿಐ-ಪಿಎಫ್​ಐ ಚಟುವಟಿಕೆಗಳು ಸದ್ದು ಮಾಡುತ್ತಿದ್ದು, ಈ ಮಧ್ಯೆ ಪೊಲೀಸರು ಪಿಎಫ್​ಐ ಸಂಘಟನೆಗೆ ಸೇರಿರುವ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಟಿಪ್ಪುನಗರದ ಅಬ್ದುಲ್ ರಜಾಕ್ ಅಬ್ದುಲ್ ಶುಕುರ್ ಹೊನ್ನಾವರ, (28), ಕೆರೆಕೊಪ್ಪದ ಇಮಾಮ್ ಅತಾವುಲ್ಲ ಅಬ್ದುಲ್ ಗಣಿ ತಡಸ್ (29), ಅಬ್ದುಲ್ ಸಮ್ಮದ್ ಸಾಬ್ (32) ಎಂಬವರನ್ನು ಶಿರಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಮೂವರು ಸಮಾಜಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿರುವ ಆರೋಪವಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಈ ಮೂವರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಶಿರಸಿ ಡಿವೈಎಸ್​ಪಿ ರವಿ ಡಿ. ನಾಯ್ಕ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net