ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಮೂರು ಪ್ರತ್ಯೇಕ ಎಫ್‌ಐಆರ್ ದಾಖಲು

Crime Logo
Published on

ಬೆಂಗಳೂರು: ಕೇಂದ್ರ ವಿಭಾಗದಮೂರು ವಸ್ತು ಸಂಗ್ರಹಾಲಯಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಮೇಲ್ ಸಂಬಂಧ ಪ್ರತ್ಯೇಕ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಬ್ಬನ್‌ಪಾರ್ಕ್, ವಿಧಾನಸೌಧ ಹಾಗೂ ಹೈಗ್ರೌಂಡ್ಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಚ್.ಟಿ ಶೇಖರ್ ತಿಳಿಸಿದ್ದಾರೆ.
ಶುಕ್ರವಾರ ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಆ್ಯಂಡ್ ಟೆಕ್ನಾಲಜಿಕಲ್ ಮ್ಯೂಸಿಯಂ, ವಿಧಾನಸೌಧ ಠಾಣಾ ವ್ಯಾಪ್ತಿಯ ರಾಜಭವನ ರಸ್ತೆಯಲ್ಲಿರುವ ಜವಹರಲಾಲ್ ನೆಹರು ತಾರಾಲಯ ಹಾಗೂ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ವಸಂತನಗರದಲ್ಲಿರುವ ನ್ಯಾಷನಲ್ ಗ್ಯಾಲರಿ ಫಾರ್ ಮಾಡರ್ನ್ ಆರ್ಟ್‌ಗೆ ಬೆದರಿಕೆ ಮೇಲ್ ಬಂದಿದ್ದವು. ಬಾಂಬ್ ಇರಿಸಲಾಗಿದ್ದು, ಬೆಳಿಗ್ಗೆ ಅವು ಸ್ಪೋಟಗೊಳ್ಳುವುದಾಗಿ ದುಷ್ಕರ್ಮಿಗಳು ಇ-ಮೇಲ್ ರವಾನಿಸಿದ್ದರು. ತಕ್ಷಣ ಆಯಾ ಠಾಣಾ ವ್ಯಾಪ್ತಿಯ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಹಾಯದಿಂದ ತಪಾಸಣೆ ನಡೆಸಿದಾಗ ಇದೊಂದು ಹುಸಿ ಬೆದರಿಕೆ ಎಂಬುದು ತಿಳಿದು ಬಂದಿತ್ತು.
ಮೂರು ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಂದೇಶ ರವಾನೆಯಾಗಿರುವ ಮೇಲ್ ಐಡಿ ಬಳಕೆದಾರರ ಮಾಹಿತಿ ನೀಡುವಂತೆ ಸಂಬಂಧಪಟ್ಟ ಕಂಪನಿಗೆ ಕೋರಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ.
ಐಪಿ ವಿಳಾಸ ನೀಡುವಂತೆ ಕೋರಿಕೆ:
ಬೆದರಿಕೆ ಸಂದೇಶ ಬಂದ ಇ-ಮೇಲ್ ವಿಳಾಸಗಳ ಐಪಿ ವಿಳಾಸ ಪತ್ತೆೆಗೆ ತಾಂತ್ರಿಕ ತನಿಖೆ ನಡೆಸಲಾಗುತ್ತಿದ್ದು, ಜತೆಗೆ ಸಂಬಂಧಿತ ಸಂಸ್ಥೆೆಗೆ ಐಪಿ ವಿಳಾಸ ನೀಡುವಂತೆ ಕೋರಲಾಗಿದೆ. ಪ್ರಾಾಥಮಿಕ ಮಾಹಿತಿ ಪ್ರಕಾರ ವಿಪಿಎನ್ ಬಳಸಿ ಬೆದರಿಕೆ ಸಂದೇಶ ಕಳುಹಿಸಿರುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net