

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ರಕ್ತ ಹರಿದಿದ್ದು, ಜನನಿಬಿಡ ಪ್ರದೇಶದಲ್ಲಿಯೇ ಟಿಎಂಸಿ ಮುಖಂಡ ಹಾಗೂ ಇಬ್ಬರು ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಗೋಪಾಲಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಅವರು ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಭೆಗೆ ತೆರಳುತ್ತಿದ್ದಾಗ ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ಪರಾರಿಯಾಗುತ್ತಿದ್ದ ಟಿಎಂಸಿ ನಾಯಕನ ಜೊತೆ ಇದ್ದ ಇಬ್ಬರು ಕಾರ್ಯಕರ್ತರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೋಟಾರ್ ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಈ ಹತ್ಯೆ ನಡೆದಿದೆ. ಈ ದಾಳಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ತನಿಖೆ ಬಳಿಕವೇ ಸತ್ಯ ಹೊರಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)