ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದವರಲ್ಲಿ ಮೂವರು ಮಾರ್ಗಮಧ್ಯೆಯೇ ಸಾವು, ಇನ್ನೊಬ್ಬರ ಪರಿಸ್ಥಿತಿ ಗಂಭೀರ

Accident
Published on

ಉತ್ತರಕನ್ನಡ: ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ರಾಮನಗರದಲ್ಲಿ ಈ ಅಪಘಾತ ಸಂಭವಿಸಿದೆ.

ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ಈ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ, ದುರ್ಗೆ ಕೋಲ್ಸೇಕರ್, ತುಳಸಿ ಗಾವಡ ಸಾವಿಗೀಡಾದವರು. ವಿಪಿನ ತಾಳ್ವೆ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಹಿಂಭಾಗದಿಂದ ವೇಗವಾಗಿ ಬಂದ ಮಹಿಂದ್ರ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ವಾಹನ ತಮಿಳುನಾಡಿನಿಂದ ಗೋವಾಕ್ಕೆ ತೆರಳುತಿದ್ದು, ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net